ಮಂಗಳವಾರ, ಜೂನ್ 22, 2021
29 °C

ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

`ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದ್ದು, ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರು ಸಾಕಾಗುತ್ತಿಲ್ಲ. ಪಂಚಾಯಿತಿಯ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ಆದಷ್ಟು ಬೇಗ ಹಣ ಬಿಡುಗಡೆ ಮಾಡಬೇಕು~ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಸಿ.ವೆಂಕಟೇಗೌಡ ಒತ್ತಾಯಿಸಿದ್ದಾರೆ.`ಸಮೀಪದ ದೊಡ್ಡಹರಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹರಳಗೆರೆ ಗ್ರಾಮದ ಬಳಿ ಪಂಚಾಯಿತಿ ವತಿಯಿಂದ ಕೊರೆಸಿರುವ ಕೊಳವೆ ಬಾವಿಯಲ್ಲಿ ಹೆಚ್ಚಿನ ಪ್ರಮಾಣದ ನೀರಿನ ಸಂಗ್ರಹವಿದೆ.ಆ ಬಾವಿಯ ಸ್ಥಳದಿಂದ ಸೂಲಿಬೆಲೆ ಗ್ರಾಮಕ್ಕೆ ಕೊಳವೆ ಮಾರ್ಗ ಅಳವಡಿಸಲು ಸುಮಾರು 10 ಲಕ್ಷ ರೂಪಾಯಿ ಅಂದಾಜು ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಕಾಮಗಾರಿಗೆ ಮಂಜೂರಾತಿ ನೀಡಬೇಕು~ ಎಂದು ಅವರು ಆಗ್ರಹಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.