ಶನಿವಾರ, ಮೇ 15, 2021
22 °C

`ನೀರಿನ ಸಮಸ್ಯೆ: ಶೀಘ್ರ ಕ್ರಮ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: ಗ್ರಾಮಾಂತರ ಮತ್ತು ಪಟ್ಟಣದ ನೀರಿನ ಸಮಸ್ಯೆ ನೀಗಿಸಲು ಅಗತ್ಯ ಹಣ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ರಸಾದ್ ತಿಳಿಸಿದರು. ಪಟ್ಟಣಕ್ಕೆ ಪ್ರಥಮ ಭಾರಿಗೆ ಆಗಮಿಸಿದ ಸಚಿವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಗನಚುಕ್ಕಿ, ಭರಚುಕ್ಕಿ ಜಲಪಾತದಲ್ಲಿ ನೀರು ಹೆಚ್ಚಾದ ನಂತರ ಈ ವರ್ಷ `ಜಲಪಾತ ಉತ್ಸವ'ವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಪಟ್ಟಣದ ಡಾ.ರಾಜ್‌ಕುಮಾರ್ ಮತ್ತು ಅಂಬೇಡ್ಕರ್ ರಸ್ತೆ ಅಗಲೀಕರಣದ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ವಹಿಸಲಿರುವುದಾಗಿ ಅವರು ತಿಳಿಸಿದರು. ಶಾಸಕ ಆರ್.ನರೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ನಂಜೇಗೌಡ, ವೀರಶೈವ ಮಹಾಸಭಾ ಕೊಳ್ಳೇಗಾಲ ಘಟಕ ಅಧ್ಯಕ್ಷ ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಶಿವಕುಮಾರ್, ನಂಜುಂಡಸ್ವಾಮಿ, ಮುಡಿಗುಂಡ ಶಾಂತರಾಜು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.