ಯಲಬುರ್ಗಾ: ಚಿತ್ತಾಪುರ ಗ್ರಾಮಸ್ಥರು ಕುಡಿಯುವ ನೀರಿಗಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪಕ್ಕದ ಕೋಮಲಾಪುರ ಗ್ರಾಮಕ್ಕೆ ಹೋಗಿ ನೀರು ತರುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ವಿಶೇಷ ಕಾಳಜಿವಹಿಸಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಸದಸ್ಯೆ ಉಮಾ ಮುತ್ತಾಳ ಮತ್ತಿತರ ಸದಸ್ಯರು ಆಗ್ರಹಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆ ಆರಂಭವಾಗಿದ್ದರ ಹಿನ್ನೆಲೆಯಲ್ಲಿ ಅನೇಕ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸಿದೆ. ಇದರಿಂದ ಜನರು ಹಾಗೂ ಜಾನುವಾರು ನೀರಿಗಾಗಿ ಪರದಾಡುವ ಸ್ಥಿತಿ ಸೃಷ್ಟಿಯಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.
ಜಿಲ್ಲಾ ಪಂಚಾಯಿತಿ ಉಪ ವಿಭಾಗದ ಅಧಿಕಾರಿ ಮನೋಜಕುಮಾರ ಮಾತನಾಡಿ, ಸಮಸ್ಯೆ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು ಕೂಡಲೇ ಅವಶ್ಯಕತೆಗೆ ಅನುಗುಣವಾಗಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಹಳ್ಳಿಗುಡಿ ಗ್ರಾಮದಲ್ಲಿ ಶಾಲಾ ಕಟ್ಟಡ ಪೂರ್ಣವಾಗಿಲ್ಲ. ಆದರೆ ಹಣ ಮಾತ್ರ ಪೂರ್ಣ ಖರ್ಚಾಗಿದೆ. ಅಲ್ಲದೆ ಕೊಠಡಿಗಳ ಅಗತ್ಯವಿರುವ ಶಾಲೆಗಳಿಗೆ ಹೆಚ್ಚುವರಿ ಕೊಠಡಿ ಮಂಜೂರಾತಿ ನೀಡಿಲ್ಲ. ಆದರೆ ಅಗತ್ಯ ಇರದೇ ಇರುವ ಕಡೆಗಳಲ್ಲಿ ಹೆಚ್ಚುವರಿ ಕೊಠಡಿಗಳನ್ನು ಮಂಜೂರು ಮಾಡಲಾಗುತ್ತಿದೆ. ಸಂಬಂಧಪಟ್ಟವರು ವಾಸ್ತವಾಂಶ ತಿಳಿಯದೇ ಯೋಜನೆಗಳನ್ನು ಜಾರಿಗೊಳಿಸುವುದು ಸರಿಯಾದ ಕ್ರಮವಲ್ಲ.

ಹಾಗೆಯೇ ಸಂಗನಾಳ ಗ್ರಾಮದ ಪ್ರೌಢಶಾಲೆಯಲ್ಲಿ ಕಳೆದ ಒಂದು ವರ್ಷದ ಹಿಂದೆಯೇ ಶೌಚಾಲಯವನ್ನು ಅರ್ಧಕ್ಕೆ ನಿರ್ಮಿಸಿ ಹೋದವರು ಮತ್ತೆ ಆ ಕಡೆ ತಿರುಗಿ ನೋಡಿಲ್ಲ. ಈ ರೀತಿ ನಿರ್ಲಕ್ಷ್ಯದಿಂದ ಮಕ್ಕಳು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ನಿರ್ಮಿತಿ ಕೇಂದ್ರದ ಅಧಿಕಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಈರಪ್ಪ ಕುಡಗುಂಟಿ ಹೇಳಿದರು.

ಕೋಳಿಹಾಳ ಗ್ರಾಮಕ್ಕೆ ಬಸ್ಸೌಲಭ್ಯ ಕಲ್ಪಿಸಿಕೊಡುವಂತೆ ಅಶೋಕ ತೋಟದ್ ಅಧಿಕಾರಿಗಳಿಗೆ ಒತ್ತಾಯಿಸಿದರು. ಯೋಜನೆಗಳ ಬಗ್ಗೆ ನಮಗೆ ಅರ್ಥವಾಗುವ ಹಾಗೆ ಬಿಡಿಸಿ ಹೇಳಿದ್ರ ಸರಿ. ಪುರಾಣ ಹೇಳಿದಂಗ ಹೇಳಿದ್ರ ಹ್ಯಾಗ ತಿಳಿಬೇಕು. ಸರಿಯಾಗಿ ಹೇಳೊದನ್ನ ಕಲೀರಿ ಎಂದು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಹೊಳೆಗೌಡ ಸಿಡಿಪಿಒ ಅವರಿಗೆ ಗುಡುಗಿದರು.

ಮೇವು ಅಭಿವೃದ್ಧಿ ಯೋಜನೆ, ರಾಸುಗಳ ಕೃತಕ ಗರ್ಭಧಾರಣೆ, ಕಾಲುಬಾಯಿ ಜ್ವರ ನಿವಾರಣಾ ಲಸಿಕೆ, ಕೊಕ್ಕರೆ ರೋಗ ವಿರುದ್ಧ ಲಸಿಕೆ ಕಾರ್ಯಕ್ರಮದಲ್ಲಿ ಶೇ. 100ರಷ್ಟು ಸಾಧನೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಇಲಾಖೆಯ ತಿಪ್ಪಣ್ಣ ತಳಕಲ್ಲ ಹೇಳಿದರು.ಪಟ್ಟಣದಲ್ಲಿ ಮೂರು ದಿನಗಳ ರೈತರ ಹಬ್ಬ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದ್ದು, ಜೊತೆಗೆ ಅತ್ಯಂತ ಮಹಾತ್ವಾಕಾಂಕ್ಷಿ ಯೋಜನೆಯಾದ ಭೂಮಿ ಚೈತನ್ಯ ಯೋಜನೆಯನ್ನು ಶೀಘ್ರದಲ್ಲಿಯೇ ಅನುಷ್ಠಾನಗೊಳಿಸಲಾಗುತ್ತದೆ. ಇದರಿಂದ ಭೂಮಿ ಹಲವು ರೀತಿಯಲ್ಲಿ ಅಭಿವೃದ್ಧಿಯಾಗಲಿದೆ ಎಂದು ಕೃಷಿ ಅಧಿಕಾರಿ ಟಿ.ಎಲ್. ನಾಯಕ ವಿವರಿಸಿದರು.

ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಪ್ರಗತಿ ವರದಿಯನ್ನು ಓದಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ರಾಮಣ್ಣ ಸಾಲಭಾವಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಜವಳಿ, ಕಾರ್ಯನಿರ್ವಾಹಕ ಅಧಿಕಾರಿ ವೈ.ಎಲ್. ಹಂಪಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.