ನೀರು ನಿಲುಗಡೆ ಭರವಸೆ

7

ನೀರು ನಿಲುಗಡೆ ಭರವಸೆ

Published:
Updated:

ಕೃಷ್ಣರಾಜಸಾಗರ (ಮಂಡ್ಯ): ಸುಪ್ರೀಂ ಕೋರ್ಟ್ ಆದೇಶ ಪಾಲನೆಯ ನಂತರ ನೀರು ನಿಲ್ಲಿಸಲಾಗುವುದು ಎಂದು ಸರ್ಕಾರದ ಪರವಾಗಿ ಜಿಲ್ಲಾಡಳಿತ ಭರವಸೆ ನೀಡಿದೆ. ಆದ್ದರಿಂದ, ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡರು ಆಮರಣ ಉಪವಾಸ ಸತ್ಯಾಗ್ರಹ ಹಿಂತೆಗೆದುಕೊಂಡಿದ್ದಾರೆ ಎಂದು ರೈತ ಸಂಘದ ಗೌರವಾಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ತಿಳಿಸಿದರು.`ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಇಂದಿನ ಮಟ್ಟಿಗೆ ವಾಪಸ್ ಪಡೆದುಕೊಂಡಿದ್ದೇವೆ. ಇಂದಿಗೆ 32 ಸಾವಿರ ಕ್ಯೂಸೆಕ್  ನೀರು ತಮಿಳುನಾಡಿಗೆ ಹರಿದು ಹೋಗಿದೆ. 50 ಸಾವಿರ ಕ್ಯೂಸೆಕ್ ನೀರು ಹರಿಸಿದ ಮೇಲೆ ನೀರನ್ನು ನಿಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ' ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry