ಮಂಗಳವಾರ, ಜೂನ್ 15, 2021
21 °C

ನೀರು ಪೂರೈಕೆಗೆ ಅಗತ್ಯ ಕ್ರಮ: ಸಚಿವರ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ನಗರದಲ್ಲಿ ನೀರಿನ ಬವಣೆಯನ್ನು ನೀಗಿಸಲು ಜಲಮಂಡಳಿ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದು, ಸಮರ್ಪಕ ನೀರು ಪೂರೈಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ~ ಎಂದು ಬೆಂಗಳೂರು ಜಲಮಂಡಳಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.ಬೆಂಗಳೂರು ಜಲಮಂಡಳಿಯು ನಗರದ ಶ್ರೀರಾಂಪುರದಲ್ಲಿ ಬುಧವಾರ ಆಯೋಜಿಸಿದ್ದ ನೀರು ಪೂರೈಕೆ ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.`ಈ ಕಾಮಗಾರಿಯನ್ನು 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಈ ಭಾಗದಲ್ಲಿ ಕೊಳವೆ ಮಾರ್ಗ ಅಳವಡಿಕೆಯಿಂದ ಎಲ್.ಎ.ಪುರ, ಭಾಷ್ಯಂನಗರ, ಶ್ರೀರಾಮಪುರ, ಸ್ವತಂತ್ರ್ಯಪಾಳ್ಯ, ಹನುಮಂತನಗರ, ನಾಗೇಂದ್ರ ಗಾರ್ಡನ್, ರಾಮಚಂದ್ರಪುರ ಬಡಾವಣೆಗಳಿಗೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗಲಿದೆ~ ಎಂದರು.`ಈಗಾಗಲೇ ಚಾಲ್ತಿಯಲ್ಲಿರುವ ಜಲಮಂಡಳಿಯ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಎಂಜಿನಿಯರ್ ಮತ್ತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೆಚ್ಚುತ್ತಿರುವ ನೀರಿನ ಅಭಾವಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು~ ಎಂದು ಅವರು ತಿಳಿಸಿದರು. ಶಾಸಕ ದಿನೇಶ್ ಗುಂಡೂರಾವ್ ಇತರರು ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.