ಶುಕ್ರವಾರ, ಮೇ 14, 2021
29 °C

ನೀರು ಪೂರೈಕೆಗೆ ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರಸಭೆ ಕುಡಿಯುವ ನೀರಿನ ಪೂರೈಕೆಯಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದೆ. ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಜೈ ಕನ್ನಡ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಒತ್ತಾಯಿಸಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಗುಲ್ಬರ್ಗ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಕಳೆದ 15ದಿನಗಳಿಂದ ನಗರದಲ್ಲಿ ಕಲುಷಿತ ನೀರು ಪೂರೈಕೆ ಮಾಡಲಾಗುತ್ತಿದೆ. ಜಿಲ್ಲಾಡಳಿತ ಹಾಗೂ ನಗರಸಭೆ ಯಾವುದೇ ರೀತಿಯಲ್ಲಿ ಕ್ರಮ ಕೈಗೊಳ್ಳದೇ ಬೇಜವಾಬ್ದಾರಿತನದಿಂದ ವರ್ತಿಸುತ್ತಿವೆ. ಸರ್ಕಾರ ಈಗಾಗಲೇ ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದರೂ ಇದುವರೆಗೂ ಯಾವುದೇ ರೀತಿಯಲ್ಲಿ ಪರಿಹಾರ ಕಾಮಗಾರಿಗಳು ಆರಂಭಗೊಂಡಿಲ್ಲ ಎಂದು ಆರೋಪಿಸಿದರು.ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಯಾವುದೇ ಪರವಾನಗಿ ಇಲ್ಲದೇ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಶುದ್ಧ ಕುಡಿಯುವ ನೀರಿನ ಹೆಸರಿನಲ್ಲಿ ಬೋರ್‌ವೆಲ್ ನೀರನ್ನು ಪ್ಲಾಸ್ಟಿಕ್ ಪೌಚ್‌ಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆಪಾದಿಸಿದರು.ಪರವಾನಗಿ ಇಲ್ಲದೇ ಇರುವ ಶುದ್ಧ ಕುಡಿಯುವ ನೀರು ಮಾರಾಟ ಮಾಡುತ್ತಿರುವ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ನಗರಸಭೆಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗೆ  ಸಂಬಂಧಿಸಿದಂತೆ ಆದೇಶ ನೀಡಬೇಕು, ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಶರಣಪ್ಪ ಎನ್, ಜಿಲ್ಲಾಧ್ಯಕ್ಷ ಟಿ.ನರಸಪ್ಪ, ಜಿಲ್ಲಾ ವಕ್ತಾರ ಶರಣಬಸವ, ಮುಖಂಡರಾದ ವೆಂಕಟಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.ಮನವಿ ಸಲ್ಲಿಸುವ ಸಂದರ್ಭದಲ್ಲಿ ಉರುಕುಂದಿ, ಫಾರೂಖ್, ಶಾಲಂ, ಮುಸ್ತಫ್, ಜಗದೀಶ, ಶರೀಫ್, ಚನ್ನಪ್ಪ, ವಸಂತಕುಮಾರ, ಮಹಾದೇವ ಅಸ್ಕಿಹಾಳ, ಆಂಜನೇಯ, ಆದೆಪ್ಪ, ಸೂಗಪ್ಪ, ಗೌಸ್, ಶಕ್ತಿನಗರ ಮಹಾದೇವ, ಗುರುಪಾದಪ್ಪ, ಪಾಗುಂಟಪ್ಪ, ಗೋವಿಂದ ಹಾಗೂ ಮತ್ತಿತರರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.