ಶನಿವಾರ, ನವೆಂಬರ್ 16, 2019
22 °C

ನೀರು ಪೂರೈಕೆಗೆ ಮಹಿಳೆಯರ ಆಗ್ರಹ

Published:
Updated:

ಕುಣಿಗಲ್: ಕಗ್ಗೆರೆ ಗ್ರಾ.ಪಂ. ವ್ಯಾಪ್ತಿಯ ಆವರಗೆರೆ ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಮಹಿಳೆಯರು ಶುಕ್ರವಾರ ಗ್ರಾ.ಪಂ. ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಆವರಗೆರೆ ಗ್ರಾಮದಲ್ಲಿ ಹಲವು ತಿಂಗಳಿನಿಂದ ವಿದ್ಯುತ್ ಪೂರೈಕೆ ಹದಗೆಟ್ಟಿದೆ. ಕುಡಿಯುವ ನೀರು ಪೂರೈಕೆ ಸ್ಥಗಿತಗೊಂಡಿದೆ. ಸಮಸ್ಯೆ ಪರಿಹರಿಸುವಂತೆ ಗ್ರಾ.ಪಂ. ಕಾರ್ಯಾಲಯಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ ಗ್ರಾ.ಪಂ. ಅಧ್ಯಕ್ಷ ಶಿವಣ್ಣ ಸಮಸ್ಯೆ ಪರಿಹರಿಸುವ ಕುರಿತು ಬೆಸ್ಕಾಂನೊಂದಿಗೆ ಚರ್ಚಿಸಿದ್ದೇನೆ. ಇನ್ನೊಂದು ವಾರದೊಳಗೆ ಸಮಸ್ಯೆ ಪರಿಹಾರವಾಗಲಿದೆ ಎಂಬ ಭರವಸೆ ಸಿಕ್ಕಿದೆ ಎಂದರು.ಇನ್ನೊಂದು ವಾರದಲ್ಲಿ ಕುಡಿಯುವ ನೀರು ಪೂರೈಕೆ ಯಥಾಸ್ಥಿತಿಗೆ ಮರಳದಿದ್ದರೆ ಕುಣಿಗಲ್‌ನ ಬೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.ಗ್ರಾ.ಪಂ. ಸದಸ್ಯೆ ಶೈಲಜಾ, ಗ್ರಾಮದ ಮಹಿಳೆಯರಾದ ನಂಜಮ್ಮ, ಗೌರಮ್ಮ, ಲಕ್ಷ್ಮಮ್ಮ ಮತ್ತಿತರರು ಉಪಸ್ಥಿತರಿದ್ದರುಬೇಸಿಗೆ ಶಿಬಿರ

ತುಮಕೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯಲ್ಲಿರುವ ಜೆ.ಡಿ.ಸ್ಕೂಲ್ ಆಫ್ ಆರ್ಟ್ಸ್‌ನಲ್ಲಿ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ವಿವರಗಳಿಗೆ ಕಸಾಪ ಕಾರ್ಯದರ್ಶಿ ಹೆಬ್ಬಾಕ ಸತೀಶ್ ಮೊ 9845759314 ಸಂಪರ್ಕಿಸಬಹುದು.

ಪ್ರತಿಕ್ರಿಯಿಸಿ (+)