ನೀರು ಪೂರೈಕೆಗೆ ವಿದ್ಯುತ್ ಕೊರತೆ

7

ನೀರು ಪೂರೈಕೆಗೆ ವಿದ್ಯುತ್ ಕೊರತೆ

Published:
Updated:
ನೀರು ಪೂರೈಕೆಗೆ ವಿದ್ಯುತ್ ಕೊರತೆ

ಬೆಂಗಳೂರು: ‘ನಗರಕ್ಕೆ ಅಗತ್ಯವಾದಷ್ಟು ನೀರು ಪೂರೈಕೆಯಾಗುತ್ತಿದೆ. ಆದರೆ ವಿದ್ಯುತ್ ವ್ಯತ್ಯಯದಿಂದಾಗಿ ನೀರು ಪೂರೈಕೆಯಲ್ಲಿ ತೊಂದರೆಯಾಗುತ್ತಿದೆ. ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಇಂಧನ ಸಚಿವರನ್ನು ಕೋರಲಾಗುವುದು’ ಎಂದು ಬೆಂಗಳೂರು ಜಲಮಂಡಳಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.ಜಲಮಂಡಳಿಯ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಶನಿವಾರ ಕೇವಲ ಒಂದು ಗಂಟೆ ವಿದ್ಯುತ್ ವ್ಯತ್ಯಯವಾಗಿದ್ದಕ್ಕೆ ನಗರದ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕೆಪಿಟಿಸಿಎಲ್ ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದರು.

 

ಮಂಗಳವಾರ ಸಭೆ: ‘ಇಂಧನ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಮಂಗಳವಾರ ಇದೇ ವಿಚಾರದಲ್ಲಿ ಸಭೆ ನಡೆಯಲಿದೆ. ತೊರೆಕಾಡನಹಳ್ಳಿ, ತಾತಗುಣಿ, ಹಾರೋಹಳ್ಳಿ ಪಂಪಿಂಗ್ ಕೇಂದ್ರಗಳಲ್ಲಿ ವಿದ್ಯುತ್ ಸ್ಥಗಿತಗೊಳಿಸದಂತೆ ಮನವಿ ಮಾಡಲಾಗುವುದು’ ಎಂದು ಸುರೇಶ್ ಕುಮಾರ್ ಹೇಳಿದರು.

 

‘ಪಂಪಿಂಗ್ ಕೇಂದ್ರಗಳಲ್ಲಿ 5- 10 ನಿಮಿಷ ವಿದ್ಯುತ್ ವ್ಯತ್ಯಯ ಉಂಟಾದರೂ ಸುಮಾರು 2 ಗಂಟೆ ಕಾಲ ನೀರು ಪೂರೈಕೆಯಲ್ಲಿ ತೊಂದರೆಯಾಗಲಿದೆ. ಇದಲ್ಲದೇ ಬೇಸಿಗೆಯಾಗಿದ್ದರಿಂದ ನೀರಿನ ಬೇಡಿಕೆ ಪ್ರಮಾಣ ಶೇ 15ರಿಂದ 20ರಷ್ಟು ಹೆಚ್ಚಾಗುವುದರಿಂದ ಸ್ವಲ್ಪ ತೊಂದರೆಯಾಗುತ್ತಿದೆ’ ಎಂದರು.‘ನಗರಕ್ಕೆ 500 ದಶಲಕ್ಷ ಲೀಟರ್ ನೀರು ಪೂರೈಸುವ ಕಾವೇರಿ ನಾಲ್ಕನೇ ಹಂತದ ಎರಡನೇ ಘಟ್ಟದ ಕಾಮಗಾರಿ ಚುರುಕುಗೊಂಡಿದ್ದು, ಮುಂದಿನ ಬೇಸಿಗೆ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸ ಇದೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry