ಬಾಗಲಕೋಟೆ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಗ್ರಾಮಗಳನ್ನು ಗುರುತಿಸಿ ಅಂತಹ ಗ್ರಾಮಗಳಿಗೆ ಆದ್ಯತೆ ಮೇರೆಗೆ ನೀರು ಪೂರೈಕೆಗೆ ಸೂಕ್ತ ಕಾರ್ಯಯೋಜನೆ ರೂಪಿಸಲು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸೂಚನೆ ನೀಡಲಾಯಿತು.ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕೆಲವು ಸದಸ್ಯರು ವಿಷಯ ಪ್ರಸ್ತಾಪಿಸಿದಾಗ ಜಿಪಂ ಸಿಇಓ ಡಾ.ಜಿ.ಸಿ.ಪ್ರಕಾಶ್ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.

ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದಲೇ ನೇರವಾಗಿ ಹಣ ಬಿಡುಗಡೆಯಾಗುತ್ತಿದ್ದು, ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಮುಖ್ಯ ಯೋಜನೆ ಕೈಗೊಳ್ಳುವುದು ಸಾಧ್ಯವಾಗುತ್ತಿಲ್ಲ ಎಂದು ಅವರು ಸಭೆಗೆ ತಿಳಿಸಿದರು.ತುರ್ತು ಅಗತ್ಯವಿರುವ ಗ್ರಾಮಗಳ ಪಟ್ಟಿ ಮಾಡಿಕೊಂಡು ಆ ಪಟ್ಟಿ ಆಧಾರದ ಮೇಲೆ ಕುಡಿಯುವ ನೀರು ಪೂರೈಕೆ ಯೋಜನೆಗಳ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬಹುದು ಎಂದರು.

ಅಧ್ಯಕ್ಷರ ಅನುದಾನ: ಪ್ರಸಕ್ತ ವರ್ಷದಿಂದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಒಂದು ಕೋಟಿ ರೂಪಾಯಿ ಅನುದಾನ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ನೀರಿನ ತೀವ್ರ ಸಮಸ್ಯೆಯಿರುವ ಗ್ರಾಮಗಳನ್ನು ಮೊದಲೇ ಗುರುತಿಸಿಕೊಂಡರೆ ಜಿಪಂ ಅಧ್ಯಕ್ಷರ ಅನುದಾನ ಬಂದರೆ ಆ ಹಣವನ್ನು ಸಮರ್ಪಕ ನೀರು ಪೂರೈಕೆಗೆ ಬಳಸಿಕೊಳ್ಳಬಹುದು ಎಂದು ಡಾ. ಪ್ರಕಾಶ್ ವಿವರಿಸಿದರು.

“ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರು ದೊರಕದೇ ಜನರು ಪರದಾಡುತ್ತಿದ್ದಾರೆ. ಇದೀಗ ಬೇಸಿಗೆ ಆರಂಭಗೊಂಡಿರುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಗಳಿದ್ದು, ಈ ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಯಾವ ರೀತಿಯ ಸಿದ್ಧತೆ ಕೈಗೊಂಡಿದ್ದಾರೆ” ಎಂದು ಕಾಂಗ್ರೆಸ್ನ ಹಿರಿಯ ಸದಸ್ಯ ವಿಠ್ಠಲ ಚೌರಿ ಪ್ರಶ್ನಿಸಿದರು.ಇದಕ್ಕೆ ಉತ್ತರಿಸಿದ ಅಧಿಕಾರಿಗಳು ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಲಾಗಿದ್ದು, ಶೀಘ್ರದಲ್ಲಿಯೇ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.

ವೈದ್ಯರ ಕೊರತೆ: ನೀರಿನ ಸಮಸ್ಯೆಗಿಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಹಾಗೂ ಮೂಲಸೌಕರ್ಯಗಳ ಕೊರತೆ ಬಗ್ಗೆಯೇ ವಿಸ್ತೃತ ಚರ್ಚೆ ನಡೆಯಿತು.
ಗುಡೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎಂಬಿಬಿಎಸ್ ವೈದ್ಯರನ್ನು ನಿಯೋಜಿಸುವಂತೆ ಸ್ಥಳೀಯ ಸದಸ್ಯರು ಒತ್ತಾಯಿಸಿದರು.ಈ ಬಗ್ಗೆ ವಿವರಣೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ಬಿ.ಚೌಧರಿ, ವೈದ್ಯರ ಕೊರತೆ ಇರುವುದರಿಂದ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎಂಬಿಬಿಎಸ್ ವೈದ್ಯರನ್ನು ನಿಯೋಜಿಸುವುದು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಈಗಿರುವ ವೈದ್ಯರನ್ನೇ ವಾರದಲ್ಲಿ ಮೂರು ದಿನಗಳಂತೆ ಬೇರೆ ಬೇರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸುವಂತೆ ಸಿಇಓ ಡಾ.ಜಿ.ಸಿ.ಪ್ರಕಾಶ್ ಸೂಚನೆ ನೀಡಿದರು.
ವೈದ್ಯರ ಕೊರತೆಯ ಬಗ್ಗೆ ಅನೇಕ ಸದಸ್ಯರು ಗಮನಸೆಳೆದಾಗ ಮಧ್ಯಪ್ರವೇಶಿಸಿದ ಶಾಸಕ ವೀರಣ್ಣ ಚರಂತಿಮಠ, ‘ಸರ್ಕಾರಿ ಸೇವೆಗೆ ವೈದ್ಯರು ಹಿಂದೇಟು ಹಾಕುತ್ತಿರುವುದರಿಂದ ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ತೀವ್ರವಾಗಿದೆ’ ಎಂದರು.

ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆದಿರುವವರನ್ನು ಕಡ್ಡಾಯವಾಗಿ ಸರ್ಕಾರಿ ಸೇವೆಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ನಿಯಮ ರೂಪಿಸಬೇಕು ಎಂದು ಸದಸ್ಯರೊಬ್ಬರು ಸಲಹೆ ನೀಡಿದಾಗ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಚರಂತಿಮಠ ಹೇಳಿದರು.

ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 6 ವೈದ್ಯರ ಭರ್ತಿಗೆ ಪ್ರಸ್ತಾವ ಸಲ್ಲಿಸುವಂತೆ ಡಾ.ಪ್ರಕಾಶ್ ತಿಳಿಸಿದರು.ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸ್ಕ್ಯಾನಿಂಗ್ ಯಂತ್ರ ಒದಗಿಸುವುದು ಸಾಧ್ಯವಿಲ್ಲ; ತಾಲ್ಲೂಕುಮಟ್ಟದ ಆಸ್ಪತ್ರೆಗಳಿಗೆ ಮಾತ್ರ ಈ ಸೌಲಭ್ಯ ಒದಗಿಸಲಾಗುವುದು ಎಂದು ಅವರು ಹೇಳಿದರು.

ಆರಂಭದಲ್ಲಿ ಸ್ಥಾಯಿ ಸಮಿತಿಗಳ ಸಭೆಯ ನಡಾವಳಿಗಳನ್ನು ಸಭೆಯಲ್ಲಿ ಮಂಡಿಸಲಾಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕವಿತಾ ದಡ್ಡೇನವರ, ಉಪಾಧ್ಯಕ್ಷ ಹೂವಪ್ಪ ರಾಠೋಡ, ಸದಸ್ಯರಾದ ಹನುಮಂತ ನಿರಾಣಿ, ವಿಠ್ಠಲ ಚೌರಿ, ಬಸವಂತಪ್ಪ ಮೇಟಿ, ಸಾವಿತ್ರಿ ಪಾಟೀಲ, ಪಾಂಡಪ್ಪ ಪೊಲೀಸ್, ಶೋಭಾ ತೋಟಗೇರಿ, ಮಹಾಂತೇಶ ಹಿಟ್ಟಿನಮಠ ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.