ಶುಕ್ರವಾರ, ಮೇ 14, 2021
35 °C

ನೀರು ಬಿಡಲು ಅಗತ್ಯ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ(ಪಿಟಿಐ): ತಮಿಳುನಾಡು ಹಾಗೂ ಪುದುಚೇರಿಗೆ ಕಾವೇರಿ ನದಿಯಿಂದ ಕರ್ನಾಟಕ ನೀರು ಬಿಡುವಂತೆ ಕೇಂದ್ರ ಸರ್ಕಾರ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ಕಚೇರಿ ರಾಜ್ಯ ಸಚಿವ ವಿ.ನಾರಾಯಣ ಸ್ವಾಮಿ ಹೇಳಿದ್ದಾರೆ.ತಮಿಳುನಾಡಿಗೆ ನೀರು ಬಿಡಲು ಕರ್ನಾಟಕ ನಿರಾಕರಿಸಿದ ನಂತರ ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡು ನ್ಯಾಯಾಂಗನಿಂದನೆ ಮೊಕದ್ದಮೆ ದಾಖಲಿಸಲು ತೀರ್ಮಾನ ಕೈಗೊಂಡ ಬೆನ್ನಲ್ಲೇ ಸಚಿವರು ಈ ಭರವಸೆ ನೀಡಿದ್ದಾರೆ. ತಮಿಳುನಾಡು ಮತ್ತು ಪುದುಚೇರಿಗಳಿಗೆ ಕರ್ನಾಟಕ ಕಾವೇರಿ ನೀರಿನ ಪಾಲನ್ನು ಬಿಡುವುದು ಕಡ್ಡಾಯ ಹಾಗೂ ಇದು ಕೇಂದ್ರ ಸರ್ಕಾರದ ಉದ್ದೇಶ ಸಹ ಎಂದು ಅವರು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.