ಭಾನುವಾರ, ಏಪ್ರಿಲ್ 11, 2021
25 °C

ನೀರು ಬಿಡುವುದಿಲ್ಲ: ಸಿಎಂ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಯಾವುದೇ ಕಾರಣಕ್ಕೂ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುವುದಿಲ್ಲ. ಜಲಾಶಯಗಳ ಕೆಳಭಾಗದಲ್ಲಿ ಬೀಳುವ ನೀರಷ್ಟೇ ತಮಿಳುನಾಡಿಗೆ ಹೋಗಲಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗುರುವಾರ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಜಿ. ಮಾದೇಗೌಡ ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ನಿಯೋಗಕ್ಕೆ ಭರವಸೆ ನೀಡಿದರು.



ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕುರಿತು `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಜಿ. ಮಾದೇಗೌಡ ಅವರು, ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ, ತಮಿಳುನಾಡಿಗೆ ನೀರು ಬಿಡಬಾರದು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದೇವೆ. ಅದಕ್ಕೆ ಅವರೂ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.