ಬೆಂಗಳೂರು: ಗ್ರಾಮೀಣ ನೀರು ಸರಬರಾಜು ವ್ಯವಸ್ಥೆಯಲ್ಲಿ ಸುಧಾರಣೆ ತರುವ ಉದ್ದೇಶದಿಂದ ನೀತಿಯಲ್ಲೇ ಬದಲಾವಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಜಗದೀಶ ಶೆಟ್ಟರ್ ಶುಕ್ರವಾರ ವಿಧಾನ ಪರಿಷತ್ನಲ್ಲಿ ತಿಳಿಸಿದರು. ಕಾಂಗ್ರೆಸ್ ಸದಸ್ಯ ವೀರಕುಮಾರ್ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈಗ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆಯ ಪೂರ್ಣ ಹೊಣೆಯನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಲಾಗಿದೆ.

ಇದು ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ನೀತಿಯಲ್ಲಿ ಬದಲಾವಣೆ ತಂದು ಹೆಚ್ಚಿನ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ವಹಿಸಿಕೊಳ್ಳಲು ನಿರ್ಧರಿಸಿದೆ’ ಎಂದರು. ಮುಂದಿನ ದಿನಗಳಲ್ಲಿ ಪಂಚಾಯಿತಿವರೆಗಿನ ನೀರು ಪೂರೈಕೆಯನ್ನು ಸರ್ಕಾರ ವಹಿಸಿಕೊಳ್ಳಲಿದೆ. ಅದಕ್ಕೆ ತಗಲುವ ವಿದ್ಯುತ್ ಶುಲ್ಕವನ್ನೂ ರಾಜ್ಯ ಸರ್ಕಾರವೇ ಪಾವತಿಸುತ್ತದೆ. ಅಲ್ಲಿಂದ ಮನೆಗಳಿಗೆ ನೀರು ಸರಬರಾಜು ಮಾಡುವುದು ಮತ್ತು ನೀರಿನ ಶುಲ್ಕ ವಸೂಲಿಯನ್ನು ಪಂಚಾಯಿತಿಗಳಿಗೆ ಬಿಡಲಾಗುತ್ತದೆ ಎಂದು ತಿಳಿಸಿದರು. ತನಿಖೆ ನಂತರ ಕ್ರಮ: ಬೆಳಗಾವಿ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ದೂರು ಇರುವ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಲಾಗುವುದು. ಅಕ್ರಮ ಕಂಡುಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.