ಮಂಗಳವಾರ, ಮೇ 18, 2021
22 °C

ನುಡಿಸಿರಿ ಸಮ್ಮೇಳನ ಅಧ್ಯಕ್ಷರಾಗಿ ಕಲಬುರ್ಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮೂಡುಬಿದಿರೆಯಲ್ಲಿ ನವೆಂಬರ್ 11ರಿಂದ 13ರವರೆಗೆ ನಡೆಯಲಿರುವ ಕನ್ನಡ ನಾಡುನುಡಿಯ ರಾಷ್ಟ್ರೀಯ ಸಮ್ಮೇಳನ `ಆಳ್ವಾಸ್ ನುಡಿ ಸಿರಿ~ಯ ಸಮ್ಮೇಳನಾಧ್ಯಕ್ಷರಾಗಿ ಸಂಶೋಧಕ ಎಂ.ಎಂ.ಕಲಬುರ್ಗಿ ಆಯ್ಕೆಯಾಗಿದ್ದಾರೆ.



`ಕನ್ನಡ ಮನಸ್ಸು; ಸಂಘರ್ಷ ಮತ್ತು ಸಾಮರಸ್ಯ~ ಎಂಬ ಪರಿಕಲ್ಪನೆಯಲ್ಲಿ ಈ ಬಾರಿಯ `ನುಡಿ ಸಿರಿ~ ನಡೆಯಲಿದೆ ಎಂದು ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಮೋಹನ ಆಳ್ವ ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.



`ಏಳು ವರ್ಷಗಳಿಂದ ನಡೆಯುತ್ತ ಬಂದ ಮಾದರಿಯಲ್ಲಿಯೇ ಈ ಬಾರಿಯ ನುಡಿ ಸಿರಿ ಕಾರ್ಯಕ್ರಮಗಳೂ ನಡೆಯಲಿವೆ. ಎಂಟನೇ ಜ್ಞಾನಪೀಠ ಪ್ರಶಸ್ತಿಯನ್ನು ಕನ್ನಡಕ್ಕೆ ತಂದುಕೊಟ್ಟ ಚಂದ್ರಶೇಖರ ಕಂಬಾರ ಅವರನ್ನು ಸನ್ಮಾನಿಸುವ ವಿಶೇಷ ಕಾರ್ಯಕ್ರಮವನ್ನು ಈ ಬಾರಿ ಹಮ್ಮಿಕೊಳ್ಳಲಾಗುವುದು.



ಹತ್ತನೇ ವರ್ಷದ ನುಡಿ ಸಿರಿ ಸಮ್ಮೇಳನವನ್ನು ಜಾಗತಿಕ ಮಟ್ಟದ ಸಮ್ಮೇಳನವನ್ನಾಗಿ ಆಯೋಗಿಸುವುದು ನಮ್ಮ ಗುರಿ. ಅದಕ್ಕಾಗಿ ಈಗಿನಿಂದಲೇ ತಯಾರಿ ನಡೆಸಲಾಗುತ್ತಿದೆ~ ಎಂದು ಅವರು ನುಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.