ನೂತನ ಕೊಠಡಿಗಳಿಗೆ ಬೀಗ, ಕಲ್ಯಾಣ ಮಂಟಪದಲ್ಲಿ ಪಾಠ!

7

ನೂತನ ಕೊಠಡಿಗಳಿಗೆ ಬೀಗ, ಕಲ್ಯಾಣ ಮಂಟಪದಲ್ಲಿ ಪಾಠ!

Published:
Updated:

 ಕೃಷ್ಣರಾಜಪುರ:  ಕೃಷ್ಣರಾಜಪುರ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಏರಿಕೆಯಿಂದ ಹೆಚ್ಚುವರಿ ಕೊಠಡಿಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಕೌದೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಕಥೆಯೇ ಬೇರೆ.

ಶಿಥಿಲವಾಗಿರುವ ಕಟ್ಟಡವನ್ನು ಕೆಡವಿದ ಜಾಗದಲ್ಲಿ ಬಿಬಿಎಂಪಿ ನಾಲ್ಕು ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿದೆ. ಈ ಕೊಠಡಿಗಳ ನಿರ್ಮಾಣ ಕಾರ್ಯ ಮುಗಿದು ಆರು ತಿಂಗಳು ಕಳೆದರೂ ಬಿಬಿಎಂಪಿ ಕೀಲಿ ಕೈ ಹಸ್ತಾಂತರಿಸಿಲ್ಲ. ಹೀಗಾಗಿ ಶಿಕ್ಷಕರು ಮಕ್ಕಳಿಗೆ ಪಕ್ಕದ ಕಲ್ಯಾಣ ಮಂಟಪದಲ್ಲಿ ಪಾಠ ಹೇಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ನೆರೆ ಗ್ರಾಮಗಳ ವಿದ್ಯಾರ್ಥಿಗಳು ಕೂಡ ಓದಲು ಶಾಲೆಗೆ ಬರುತ್ತಿರುವುದರಿಂದ ದಾಖಲಾತಿ ಹೆಚ್ಚುತ್ತಿದೆ. ಅದಕ್ಕೆ ಅನುಗುಣವಾಗಿ ಬಿಬಿಎಂಪಿಯು ನಾಲ್ಕು ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿದೆ.ವಿಚಿತ್ರ ಸಂಗತಿಯೆಂದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡ ಬಿಬಿಎಂಪಿಯ ಗಮನಸೆಳೆದರೂ ಕೀಲಿ ಕೈ ಹಸ್ತಾಂತರಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಹೀಗಾಗಿ ಪಾಠ ಪ್ರವಚನಗಳು ಕಲ್ಯಾಣ ಮಂಟಪದಲ್ಲಿ ನಡೆಯಬೇಕಾದ ಪರಿಸ್ಥಿತಿ ಒದಗಿದೆ ಎಂದು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಮಂಜುಳಾ ದೂರಿದ್ದಾರೆ.

 

ಕಲ್ಯಾಣ ಮಂಟಪದಲ್ಲಿ ಶುಭ ಕಾರ್ಯಗಳು ನಡೆಯುವ ಸಂದರ್ಭದಲ್ಲಿ ಸ್ಥಳಾವಕಾಶದ ಕೊರತೆಯಿಂದ ಶಾಲಾ ಮುಂಭಾಗದಲ್ಲಿ ಮಕ್ಕಳನ್ನು ಕೂರಿಸಿ ಶಿಕ್ಷಕರು ಪಾಠ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry