ಮಂಗಳವಾರ, ಮೇ 11, 2021
19 °C

ನೂತನ ಗಣಿ ಕಾಯ್ದೆ ಜಾರಿಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಪ್ರಸಕ್ತ ವರ್ಷ ದಾಖಲೆ ಪ್ರಮಾಣದ 17,000 ಮೆ.ವಾ. ವಿದ್ಯುತ್ ಉತ್ಪಾದಿಸುವ ಗುರಿ ಇದ್ದು, ಇದಕ್ಕೆ ಪೂರಕವಾಗಿ ನೂತನ ಗಣಿ ಮತ್ತು ಖನಿಜ ಕಾಯ್ದೆಯನ್ನು ತ್ವರಿತವಾಗಿ ರೂಪಿಸಲು ಸರ್ಕಾರ ನಿರ್ಧರಿಸಿದೆ.ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ ಟಿ.ಕೆ.ಎ.ನಾಯರ್ ಅವರು ಒಂಬತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಲ್ಲಿದ್ದಲು, ವಿದ್ಯುತ್, ಗಣಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಉಕ್ಕು, ನವೀಕೃತ ಹಾಗೂ ಬರಿದಾಗದ ಶಕ್ತಿಮೂಲಗಳ ಇಲಾಖೆಗಳ ಪ್ರತಿನಿಧಿಗಳು ಈ ಸಭೆಯಲ್ಲಿದ್ದರು.

 

ಉಕ್ಕು ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಹಿಂದೂಸ್ತಾನ್ ಸ್ಟೀಲ್ ವರ್ಕ್ಸ್ ಕನ್ಸ್‌ಟ್ರಕ್ಷನ್ ಲಿಮಿಟೆಡ್‌ನ್ನು ಪುನರ್‌ನಿರ್ಮಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. 2016ರ ವೇಳೆಗೆ ರಾಷ್ಟ್ರವು ಉಕ್ಕು ಉತ್ಪಾದನೆಯಲ್ಲಿ ಅಮೆರಿಕ ಮತ್ತು ಜಪಾನನ್ನು ಹಿಂದಿಕ್ಕಿ ಜಗತ್ತಿನಲ್ಲಿ ಎರಡನೇ ಸ್ಥಾನಕ್ಕೆ ಏರುವ ಸಾಧ್ಯತೆ ಕುರಿತು ಪ್ರಸ್ತಾಪಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.