ನೂರಾರು ಕಾಂಗ್ರೆಸ್ ಕಾರ್ಯಕರ್ತರ ಬಂಧನ

7

ನೂರಾರು ಕಾಂಗ್ರೆಸ್ ಕಾರ್ಯಕರ್ತರ ಬಂಧನ

Published:
Updated:

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಕೈಗೊಂಡಿರುವ ಭ್ರಷ್ಟಾಚಾರ ವಿರೋಧಿ ಯಾತ್ರೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಯತ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸೇರಿದಂತೆ ನೂರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಭಾನುವಾರ ಬಂಧಿಸಿದರು.ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿ ಜಮಾಯಿಸಿದ್ದ ನೂರಾರು ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು.ಪ್ರತಿಭಟನೆ ನಡೆಸಲು ಎಂ.ಜಿ ರಸ್ತೆಯ ಮಹಾತ್ಮ ಗಾಂಧಿ ಪ್ರತಿಮೆ ಎದುರು ಮೂರು ವಾಹನಗಳಲ್ಲಿ ಬಂದ ಕಾರ್ಯಕರ್ತರನ್ನೂ ಬಂಧಿಸಿ ಕರೆದೊಯ್ದರು. ಹೆಬ್ಬಾಳದಲ್ಲಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರನ್ನೂ ಪೊಲೀಸರು ಬಂಧಿಸಿದರು.ಬಂಧನಕ್ಕೆ ವಿರೋಧ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಪೊಲೀಸರ ವರ್ತನೆಯನ್ನು ಖಂಡಿಸಿದರು.`ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಹಕ್ಕಿದೆ. ಅಡ್ವಾಣಿ ಬರುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಮುಂದಾದ ಕಾರ್ಯಕರ್ತರನ್ನು ಬಂಧಿಸಿದ್ದು ಖಂಡನೀಯ. ಶಾಂತಿಯುತ ಪ್ರತಿಭಟನೆ ನಡೆಸಲು ಅವಕಾಶ ನೀಡದಿದ್ದರೆ ಹೇಗೆ?~ ಎಂದು ಪ್ರಶ್ನಿಸಿದರು.`ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಜೈಲಿನಲ್ಲಿದ್ದಾರೆ.  ಆದರೆ ಅಡ್ವಾಣಿ ಮಾತ್ರ ಭ್ರಷ್ಟಾಚಾರ ವಿರೋಧಿ ಯಾತ್ರೆ ನಡೆಸುತ್ತಿದ್ದಾರೆ~ ಎಂದು ಅವರು ವ್ಯಂಗ್ಯವಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry