ಮಂಗಳವಾರ, ಮೇ 11, 2021
24 °C

ನೂರಾರು ಮರಗಳ ಹನನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು: ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆ-ಶೀಪ್) ಯೋಜನೆಯಡಿಯಲ್ಲಿ ತುಮಕೂರು ಹೆದ್ದಾರಿ ಅಗಲೀಕರಣ ನೆಪದಲ್ಲಿ ಬೃಹತ್ ಮರಗಳನ್ನು ಕಡಿದು ಹಾಕಿರುವ ಘಟನೆ ಸಮೀಪದ ಹೆಮ್ಮನಹಳ್ಳಿ ರಸ್ತೆಯಲ್ಲಿ ನಿರಂತರ ನಡೆಯುತ್ತಿದೆ.ಕಳೆದ ಒಂದು ವಾರದಿಂದ 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದ್ದು, ಈ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ವಲಯ ಕಚೇರಿ ಎದುರಿನಲ್ಲೇ 5 ಬೃಹತ್ ಮರಗಳನ್ನು ಕಡಿದು ಧರೆಗೆ ಉರುಳಿಸಲಾಗಿದೆ. ಇದಕ್ಕೂ ಮುನ್ನ ಮಳವಳ್ಳಿ ರಸ್ತೆಯಲ್ಲಿ ಇದೇ ಹೆದ್ದಾರಿ ಅಗಲೀಕರಣ ಸಂಬಂಧ 200ಕ್ಕೂ ಹೆಚ್ಚು ಮರಗಳನ್ನು ಕಡಿದು ಸಾಗಿಸಿರುವುದು ಪಟ್ಟಣದ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಆಗ್ರಹ: ಟೆಂಡರ್ ಮೂಲಕ ನೂರಾರು ಮರಗಳನ್ನು ಕಡಿಯ ಲಾಗಿದ್ದು, ಕಡಿದ ಸ್ಥಳದಲ್ಲಿ ಈ ಕೂಡಲೇ ಅರಣ್ಯ ಇಲಾಖೆ ಹೊಸದಾಗಿ ಗಿಡ ನೆಡುವ ಕೆಲಸಕ್ಕೆ ಮುಂದಾಗ ಬೇಕು. ಅಲ್ಲದೇ ಸರ್ಕಾರೇತರ ಸ್ವಯಂ ಸೇವಾ ಸಂಘಟನೆಗಳ ನೆರವಿನೊಂದಿಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಲಾರಾ ಪ್ರಸನ್ನ ಆಗ್ರಹಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.