ಶನಿವಾರ, ಮೇ 28, 2022
26 °C

ನೆಟ್ಟಕಲ್ಲಪ್ಪ ಸ್ಮಾರಕ ರಸ್ತೆ ಓಟ; ಸ್ಪರ್ಧೆಯಲ್ಲಿ ಪ್ರಮುಖರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ:  ಡೆಕ್ಕನ್ ಅಥ್ಲೆಟಿಕ್ ಕ್ಲಬ್ ಆಶ್ರಯದ `ಪ್ರಜಾವಾಣಿ- ಡೆಕ್ಕನ್ ಹೆರಾಲ್ಡ್~ ಪ್ರಾಯೋಜಿತ ಕೆ.ಎ.ನೆಟ್ಟಕಲ್ಲಪ್ಪ ಸ್ಮಾರಕ ರಾಜ್ಯಮಟ್ಟದ ರಸ್ತೆ ಓಟದ ಸ್ಪರ್ಧೆ ಭಾನುವಾರ ಬೆಳಿಗ್ಗೆ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ನೂರಾರು ಮಂದಿ ಓಟಗಾರರು ಇಲ್ಲಿಗೆ  ಶನಿವಾರವೇ ಆಗಮಿಸಿದ್ದಾರೆ.ಮಹಿಳಾ ವಿಭಾಗದಲ್ಲಿ ಕಳೆದ ವರ್ಷದ ಚಾಂಪಿಯನ್ ತಿಪ್ಪವ್ವ ಸಣ್ಣಕ್ಕಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಅನುಭವಿ ಓಟಗಾರ್ತಿಯರೂ ಬಂದಿದ್ದಾರೆ.ಸಮೀಪದ ಬೆಂಗಳೂರು, ದೂರದ ಬೀದರ್, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಸ್ಪರ್ಧಿಗಳು ಬಂದಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಪೊಲೀಸ್ ಮುಖ್ಯಾಧಿಕಾರಿ ಅನುಪಮಾ ಅಗರವಾಲ್ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.