ಶನಿವಾರ, ಮೇ 8, 2021
26 °C
ನ್ಯೂಜಿಲೆಂಡ್ ಎದುರು ಗೆಲ್ಲಲೇಬೇಕಾದ ಒತ್ತಡದಲ್ಲಿ ಆಸ್ಟ್ರೇಲಿಯಾ

`ನೆರೆಯ ರಾಷ್ಟ್ರ'ಗಳ ಪೈಪೋಟಿ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬರ್ಮಿಂಗ್‌ಹ್ಯಾಮ್ (ಪಿಟಿಐ): ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ಗೆ ಶರಣಾಗಿದ್ದ ಆಸ್ಟ್ರೇಲಿಯಾ ಈಗ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಆದರೆ ತಮ್ಮ ಚೊಚ್ಚಲ ಪಂದ್ಯದಲ್ಲಿ ಒಂದು ವಿಕೆಟ್‌ನ ಜಯಭೇರಿ ಬಾರಿಸಿದ್ದ ನ್ಯೂಜಿಲೆಂಡ್ ವಿಶ್ವಾಸದಿಂದ ಕಣಕ್ಕಿಳಿಯಲು ಎದುರು ನೋಡುತ್ತಿದೆ.ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ `ಎ' ಗುಂಪಿನ ಪಂದ್ಯದಲ್ಲಿ ನೆರೆಹೊರೆ ರಾಷ್ಟ್ರಗಳಾದ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪೈಪೋಟಿ ನಡೆಸಲಿವೆ.ಹಾಲಿ ಚಾಂಪಿಯನ್ ಕೂಡ ಆಗಿರುವ ಆಸ್ಟ್ರೇಲಿಯಾ ಹಲವು ಸಮಸ್ಯೆಗಳಿಗೆ ಸಿಲುಕಿದೆ. ಬೆನ್ನು ನೋವಿಗೆ ಒಳಗಾಗಿರುವ ಈ ತಂಡದ ನಾಯಕ ಮೈಕಲ್ ಕ್ಲಾರ್ಕ್ ಕಿವೀಸ್ ವಿರುದ್ಧದ ಪಂದ್ಯಕ್ಕೂ ಲಭ್ಯರಾಗುತ್ತಿಲ್ಲ. ಅವರ ಬದಲು ಈ ಪಂದ್ಯದಲ್ಲೂ ಜಾರ್ಜ್ ಬೇಲಿ ತಂಡ ಮುನ್ನಡೆಸಲಿದ್ದಾರೆ.ನ್ಯೂಜಿಲೆಂಡ್ ಎದುರಿನ ಈ ಪಂದ್ಯದಲ್ಲಿ ಸೋಲು ಕಂಡರೆ ಕಾಂಗರೂ ಬಳಗ ಟೂರ್ನಿಯಿಂದ ಹೊರಬೀಳುವ ಸಾಧ್ಯತೆ ಇದೆ. ಹಾಗಾಗಿ ಈ ತಂಡದ ಪಾಲಿಗೆ ಇದು ಬಹುಮುಖ್ಯ ಪಂದ್ಯ. `ಎ' ಗುಂಪಿನ ಪಾಯಿಂಟ್ ಪಟ್ಟಿಯಲ್ಲಿ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ಮೊದಲ ಎರಡು ಸ್ಥಾನದಲ್ಲಿವೆ. `ಎ' ಹಾಗೂ `ಬಿ' ಗುಂಪಿನಲ್ಲಿ ಮೊದಲ ಎರಡು ಸ್ಥಾನ ಪಡೆಯುವ ತಂಡಗಳು ಸೆಮಿಫೈನಲ್ ಪ್ರವೇಶಿಸುತ್ತವೆ.ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಆಸೀಸ್‌ಗೆ 270 ರನ್‌ಗಳ ಗುರಿ ಬೆನ್ನಟ್ಟಲು ಸಾಧ್ಯವಾಗಿರಲಿಲ್ಲ. ನಾಯಕ ಬೇಲಿ ಹಾಗೂ ಆಲ್‌ರೌಂಡರ್ ಫಾಕ್ನರ್ ಹೊರತುಪಡಿಸಿ ಉಳಿದೆಲ್ಲಾ ಬ್ಯಾಟ್ಸ್ ಮನ್‌ಗಳು ವಿಫಲರಾಗಿದ್ದರು.ಹಾಗಾಗಿ ಬ್ಯಾಟ್ಸ್‌ಮನ್‌ಗಳ ಮೇಲೆ ಈಗ ಹೆಚ್ಚಿನ ಒತ್ತಡವಿದೆ. ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಡೇವಿಡ್ ವಾರ್ನರ್ ಹಾಗೂ ಶೇನ್ ವಾಟ್ಸನ್ ಅವರಿಂದ ಉತ್ತಮ ಆಟದ ನಿರೀಕ್ಷೆಯಲ್ಲಿ ತಂಡವಿದೆ.ಪಂದ್ಯ ಆರಂಭ: ಸಂಜೆ 5.30ಕ್ಕೆ (ಭಾರತೀಯ ಕಾಲಮಾನ)

ನೇರ ಪ್ರಸಾರ: ಸ್ಟಾರ್ ಕ್ರಿಕೆಟ್

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.