ನೆಲಮಂಗಲ: ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿ

7

ನೆಲಮಂಗಲ: ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿ

Published:
Updated:

ನೆಲಮಂಗಲ: ಎಲ್‌ಜಿ ಕಂಪೆನಿಯ ಗೃಹೋಪಯೋಗಿ ವಸ್ತುಗಳನ್ನು ಸಂಗ್ರಹಿಸಿದ್ದ ಉಗ್ರಾಣದಲ್ಲಿ ಸೋಮವಾರವೂ ಸಣ್ಣ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿತ್ತು.ಈ ಉಗ್ರಾಣದಲ್ಲಿ ಭಾನುವಾರ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡು ಕೋಟ್ಯಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಹೋಗಿದ್ದವು. ಅಗ್ನಿಶಾಮಕ ಸಿಬ್ಬಂದಿ 10 ತಾಸಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದರು. ಬೆಂಕಿಗೆ ಆಹುತಿಯಾಗಿದ್ದ ಫ್ರಿಡ್ಜ್, ಟಿ.ವಿ ಮತ್ತಿತರ ಗೃಹೋಪಯೋಗಿ ವಸ್ತುಗಳು ಆಗಾಗ್ಗೆ ಸಣ್ಣ ಪ್ರಮಾಣದಲ್ಲಿ ಹೊತ್ತಿ ಉರಿಯುತ್ತಿದ್ದ ದೃಶ್ಯ ಕಂಡುಬಂತು.ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದರು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಜಿಪಿ ಎ.ಆರ್. ಇನ್ಫಂಟ್, ನಿರ್ದೇಶಕ ಬಿ.ಜಿ.ಚೆಂಗಪ್ಪ, ಹಂಪಗೋಳ್ ಇತರರು ಘಟನಾ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry