ಶುಕ್ರವಾರ, ಮೇ 14, 2021
21 °C

ನೆಲ್ಸನ್ ಮಂಡೇಲಾ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೋಹಾನ್ಸ್‌ಬರ್ಗ್ (ಪಿಟಿಐ): ವರ್ಣಭೇದ ನೀತಿಯ ವಿರುದ್ದ ಜೀವನ ಪರ್ಯಂತ ಹೋರಾಡಿದ ಹಾಗೂ ದಕ್ಷಿಣ ಆಫ್ರಿಕಾದ ಮೊದಲ ಕಪ್ಪು ವರ್ಣಿಯ ಅಧ್ಯಕ್ಷ ಎಂದು ಹೆಸರಾದ ನೊಬೆಲ್ ಪ್ರಶಸ್ತಿ ಪುರಸ್ಕೃತ ನೆಲ್ಸನ್ ಮಂಡೇಲಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ಶನಿವಾರ ದಾಖಲಿಸಲಾಗಿದೆ.ಇವರಿಗೆ 94 ವರ್ಷ ವಯಸ್ಸಾಗಿದ್ದು, ಅವರು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಪದೇ ಪದೇ ಪುನರಾವರ್ತಿತವಾಗುತ್ತಿರುವ ಸೋಂಕಿನಿಂದ ಮಂಡೇಲಾ ಅವರು ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ಹೇಳಲಾಗಿದೆ.ಮಂಡೇಲಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೆ ನೆಲ್ಸನ್ ಮಂಡೇಲ ಅವರ ಕುರಿತು ಪ್ರಕಟಗೊಂಡ ಲೇಖನ ಇಲ್ಲಿದೆ : ಮಂಡೇಲಾ ಪರಂಪರೆಯ ಲಾಭಕ್ಕಾಗಿ...

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.