ಗುರುವಾರ , ಮೇ 13, 2021
35 °C

`ನೆಲ, ಜಲ ಸಂರಕ್ಷಣೆಗೆ ಬದ್ಧ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ನಾಡಿನ ನೆಲ, ಜಲ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯು ನಗರದಲ್ಲಿ ಕರವೇ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡರ 47 ನೇ ಜನ್ಮದಿನದ ಪ್ರಯುಕ್ತ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.`ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿದ್ದಾಗ ರಾಜ್ಯದ ಬಹುಭಾಗಗಳನ್ನು ಸಂಚರಿಸಿದ್ದೇನೆ. ಗಡಿನಾಡ ಕನ್ನಡಿಗರ ಅನೇಕ ಸಮಸ್ಯೆಗಳನ್ನು ಅರ್ಥೈಸಿಕೊಂಡಿದ್ದೇನೆ. ಅಲ್ಲಿ ಕನ್ನಡಿಗರಿಗೆ ರಕ್ಷಣೆಯಿಲ್ಲ, ಅಲ್ಲಿ ಕನ್ನಡ ಶಾಲೆಗಳಿಲ್ಲ. ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ಪ್ರಯತ್ನಿಸುತ್ತದೆ' ಎಂದು ಭರವಸೆ ನೀಡಿದರು.ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.