ಶುಕ್ರವಾರ, ಮೇ 7, 2021
19 °C

ನೇಕಾರರ ಅಭಿವೃದ್ಧಿಗೆ 50 ಕೋಟಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ನೇಕಾರರ ಅಭಿವೃದ್ಧಿಗೆ ಸರ್ಕಾರ ರೂ. 50 ಕೋಟಿ ಬಿಡುಗಡೆ ಮಾಡಿದೆ ಎಂದು ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಲಕ್ಷ್ಮೀನಾರಾಯಣ ತಿಳಿಸಿದರು. ನಗರದ ಕಲಾಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ಕೈಮಗ್ಗ ನಿಗಮ ನೇಕಾರರ ಅಭಿವೃದ್ಧಿಗೆ ಸರ್ಕಾರ ನೂತನ ಯೋಜನೆ ರೂಪಿಸಿ ರೂ. 50 ಕೋಟಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ದೇವಾಂಗ ಸಂಘ ಸಮುದಾಯದ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗಿದೆ. ಜೊತೆಗೆ ದೇವಾಂಗ ಜನಾಂಗದ ಮಕ್ಕಳ ವಿಧ್ಯಾಭ್ಯಾಸಕ್ಕೂ ಅಷ್ಟೆ ಮಹತ್ವ ನೀಡಲಾಗಿದೆ. ಜನಾಂಗದ ವಿದ್ಯಾವಂತರು ಸಂಘಟನೆ ಶ್ರಮಿಸಬೇಕು ಎಂದು ಕರೆ ನೀಡಿದರು.ಸಮಾಜದ ಸಂಘಟನೆಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ದೇವಾಂಗ ವಿದ್ಯಾರ್ಥಿ ನಿಲಯ ನಿರ್ಮಿಸಲು ತಲಾ ರೂ. 25 ಲಕ್ಷ ನೀಡಲಾಗಿದೆ. ಆದರೆ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿ ನಿಲಯಗಳ ಕಾಮಗಾರಿ ಪ್ರಗತಿಯಲ್ಲಿವೆ. ಈ ಜಿಲ್ಲೆಯ ವಿದ್ಯಾರ್ಥಿ ನಿಲಯಕ್ಕೆ ರೂ. 5 ಲಕ್ಷ ಹಣ ನೀಡಿದ್ದು, ಕಾಮಗಾರಿ ನಡೆಯುತ್ತಿದೆ ಎಂದರು.ರಾಜ್ಯ ದೇವಾಂಗ ನೌಕರರ ಸಂಘದ ಅಧ್ಯಕ್ಷ ಕೆ.ಆರ್. ಸುರೇಶ್, ಬೆಂಗಳೂರು ಪಶು ಸಂಗೋಪನ ಇಲಾಖೆಯ ಜಂಟಿ ಆಯುಕ್ತ ಬಿ. ನಾಗರಾಜು, ಜಿಲ್ಲಾ ಪಂಚಾಯಿತಿ ಸದಸ್ಯ ನಂಜುಂಡ ಸ್ವಾಮಿ, ಬೆಂಗಳೂರಿನ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಕೆ.ಆರ್. ಶ್ರೀನಿವಾಸ್, ಉದ್ಯೋಗ ಮತ್ತು ತರಬೇತಿ ಇಲಾಖೆ  ಜಂಟಿ ನಿರ್ದೇಶಕ ಕೆ. ರಾಮಚಂದ್ರಪ್ಪ, ಬಳ್ಳಾರಿ ಕೇಂದ್ರ ವಲಯ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಬಿ.ಆರ್.ಮಂಜೇಶ್, ಲೆಕ್ಕಪತ್ರ ಪರಿಶೋಧಕ ಡಿ.ಎಲ್. ಜಲೇಂದ್ರ, ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಬಿ. ಸೋಮಶೇಖರ್ ಇತರರು ಇದ್ದರು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನಿಸಲಾಯಿತು.         

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.