ಶುಕ್ರವಾರ, ಏಪ್ರಿಲ್ 16, 2021
31 °C

ನೇಕಾರರ ಸಮಸ್ಯೆಗೆ ಸ್ಪಂದಿಸದ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನೇಕಾರರ ಮತಗಳನ್ನು ಅನಾಯಾಸವಾಗಿ ಪಡೆಯುತ್ತಿರುವ ಜನಪ್ರತಿನಿಧಿಗಳು, ಈ ಸಮುದಾಯದವರಿಗೆ ಒದಗಿಸಬೇಕಾದ ಸವಲತ್ತುಗಳ ಕುರಿತು ಚಿಂತಿಸುತ್ತಿಲ್ಲ. ನೇಕಾರರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ.ಶೇಖರ್ ಆರೋಪಿಸಿದರು. ಕರ್ನಾಟಕ ನೇಕಾರರ ಕ್ಷೇಮಾಭಿವೃದ್ಧಿ ಸಂಘವು ನಗರದ ಪುರಭವನದಲ್ಲಿ ಬುಧವಾರ ಆಯೋಜಿಸಿದ್ದ ದೇವರ ದಾಸಿಮಯ್ಯ ಟ್ರಸ್ಟ್ ಉದ್ಘಾಟಿಸಿ ಅವರು ಮಾತನಾಡಿದರು.‘ದಾಸಿಮಯ್ಯನವರ ವಚನಗಳು ಆಧುನಿಕ ಸಮಾಜಕ್ಕೆ ಪ್ರಸ್ತುತವಾಗಿದ್ದು, ಆತನ ತತ್ವಗಳನ್ನು ಯುವಜನತೆ ಅನುಸರಿಸಬೇಕು’ ಎಂದು ಹೇಳಿದರು. ಬಿ.ಡಿ.ಸಿ.ಸಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಹಂಪಿ ಹೇಮಕೂಟದ ದಯಾನಂದಪುರಿ ಸ್ವಾಮೀಜಿ, ಗುರುಸಿದ್ಧೇಶ್ವರ ಬೃಹನ್ಮಠ ಬಸವರಾಜ ಪಟ್ಟದಾರ್ಯ, ಶರಣ ಶಿವಲಿಂಗೇಶ್ವರ ಮಠದ ಈಶ್ವರಾನಂದ ಸ್ವಾಮೀಜಿ, ಶಾಸಕರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ ಮತ್ತಿತರರು ಉಪ್ಥತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.