ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆಗೆ ಶರಣು

ಗುರುವಾರ , ಜೂಲೈ 18, 2019
29 °C

ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆಗೆ ಶರಣು

Published:
Updated:

ಬೆಂಗಳೂರು: ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲ್ವರ್ ಜ್ಯೂಬಿಲಿ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಮಾಡುವ ಅಂಗಡಿ ಇಟ್ಟುಕೊಂಡಿರುವ ಹಫೀಜ್ ರೆಹಮಾನ್ ಎಂಬುವರ ಪತ್ನಿ ಶಹನಾ ಕೌಜರ್ (23) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಬೇಲೂರಿನವರಾದ ಶಹನಾ ಮೂರು ತಿಂಗಳ ಹಿಂದೆ ಹಫೀಜ್‌ನನ್ನು ವಿವಾಹವಾಗಿದ್ದರು.ಹನ್ನೆರಡು ಗಂಟೆ ಸುಮಾರಿಗೆ ಕೆಲಸಕ್ಕೆ ಹೋಗಿದ್ದ ಹಫೀಜ್ ಮಧ್ಯಾಹ್ನ ಮೂರು ಗಂಟೆಗೆ ಮನೆಗೆ ಬಂದಾಗ ಪ್ರಕರಣ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.`ಕೂಡಲೇ ಪತ್ನಿಯನ್ನು ನೇಣಿನ ಕುಣಿಕೆಯಿಂದ ಕೆಳಗಿಳಿಸಿ ಆಸ್ಪತ್ರೆಗೆ ಕೊಂಡೊಯ್ದರಾದರೂ ಆಕೆ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದರು. ಘಟನೆ ವೇಳೆ ಹಫೀಜ್‌ನ ತಾಯಿ ಮನೆಯಲ್ಲೇ ಮಲಗಿದ್ದರು~ ಎಂದು ಪೊಲೀಸರು ತಿಳಿಸಿದರು.`ಅಳಿಯ ಹಫೀಜ್ ಮತ್ತು ಆತನ ತಾಯಿ ಮಗಳಿಗೆ ವರದಕ್ಷಿಣೆ ಹಣಕ್ಕಾಗಿ ಪೀಡಿಸುತ್ತಿದ್ದರು, ಇದರಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ~ ಎಂದು ಶಹನಾ ಪೋಷಕರು ದೂರು ನೀಡಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್.ಜೆ.ಪಾರ್ಕ್ ಪೊಲೀಸರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry