ಭಾನುವಾರ, ಮೇ 16, 2021
22 °C

ನೇಣು ಹಾಕಿಕೊಂಡು ಯುವತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಂಪಿಗೆಹಳ್ಳಿ ಸಮೀಪದ ಅಗ್ರಹಾರ ಲೇಔಟ್‌ನಲ್ಲಿ ಮೈತ್ರಿ (19) ಎಂಬ ವಿದ್ಯಾರ್ಥಿನಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಗ್ರಹಾರ ಲೇಔಟ್ 16ನೇ ಅಡ್ಡರಸ್ತೆ ನಿವಾಸಿ ಸಂಪತ್‌ಕುಮಾರ್ ಎಂಬುವರ ಮಗಳಾದ ಮೈತ್ರಿ, ಯಲಹಂಕದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ಓದುತ್ತಿದ್ದಳು. ಕುಟುಂಬ ಸದಸ್ಯರೆಲ್ಲಾ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆಕೆ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾಳೆ ಎಂದು ಸಂಪಿಗೆಹಳ್ಳಿ ಪೊಲೀಸರು ತಿಳಿಸಿದ್ದಾರೆ.`ತಂಗಿ, ದರ್ಶನ್ ಎಂಬಾತನನ್ನು ಎರಡು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದಳು. ಈ ವಿಷಯ ತಿಳಿದು ಆತನ ಜತೆ ತಂಗಿಯ ಮದುವೆ ಮಾಡಲು ನಿರ್ಧರಿಸಿದ್ದೆವು. ಆದರೆ, ಆತ ಬೇರೊಬ್ಬ ಯುವತಿಯನ್ನು ಮದುವೆಯಾಗುವ ಉದ್ದೇಶಕ್ಕಾಗಿ ತಂಗಿಯನ್ನು ವಿವಾಹವಾಗಲು ನಿರಾಕರಿಸಿದ್ದ. ಇದರಿಂದ ಬೇಸರಗೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ' ಎಂದು ಮೈತ್ರಿ ಅಣ್ಣ ಚಲುವರಾಜು ದೂರು ಕೊಟ್ಟಿದ್ದಾರೆ.`ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದರ್ಶನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.