ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

7

ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

Published:
Updated:

ಬೆಂಗಳೂರು: ರಾಮಮೂರ್ತಿನಗರ ಸಮೀಪದ ವಿಜಿನಾಪುರದಲ್ಲಿ ವಿಷ್ಣುದಾಸ್ (11) ಎಂಬ ವಿದ್ಯಾರ್ಥಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ವಿಜಿನಾಪುರ ಎರಡನೇ ಅಡ್ಡರಸ್ತೆಯಲ್ಲಿ ವಾಸವಿರುವ ರವಿಚಂದ್ರನ್ ಮತ್ತು ಬಿಂದು ದಂಪತಿಯ ಮಗನಾದ ವಿಷ್ಣುದಾಸ್, ಸ್ಥಳೀಯ ಖಾಸಗಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದ.ಆತ ಸಂಜೆ ಆರು ಗಂಟೆ ಸುಮಾರಿಗೆ ಮನೆಯ ಕೊಠಡಿಯೊಂದರಲ್ಲಿ ನೇಣು ಹಾಕಿಕೊಂಡಿದ್ದಾನೆ. ಬಿಂದು ಅವರು ಮಗನನ್ನು ಊಟಕ್ಕೆ ಕರೆಯಲು ಕೊಠಡಿಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.`ಸದಾ ಟಿ.ವಿ ನೋಡುತ್ತಿದ್ದ ಮಗನಿಗೆ ಓದಿನ ಬಗ್ಗೆ ಆಸಕ್ತಿ ಇರಲಿಲ್ಲ. ಈ ಕಾರಣಕ್ಕಾಗಿ ಆತನಿಗೆ ವಿದ್ಯಾಭ್ಯಾಸದ ಕಡೆ ಗಮನಹರಿಸುವಂತೆ ಬುದ್ಧಿ ಹೇಳಿದೆ. ಇದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ' ಎಂದು ಬಿಂದು ಅವರು ಹೇಳಿಕೆ ಕೊಟ್ಟಿದ್ದಾರೆ.ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry