ಭಾನುವಾರ, ಮಾರ್ಚ್ 7, 2021
28 °C

ನೇತಾಜಿಗೆ ಸಂಬಂಧಿಸಿದ 100 ಕಡತಗಳು ಬಹಿರಂಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೇತಾಜಿಗೆ ಸಂಬಂಧಿಸಿದ 100 ಕಡತಗಳು ಬಹಿರಂಗ

ನವದೆಹಲಿ (ಐಎಎನ್‌ಎಸ್‌): ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರಿಗೆ ಸಂಬಂಧಿಸಿದ 100 ರಹಸ್ಯ ಕಡತ­ಗಳನ್ನು ಕೇಂದ್ರ ಸರ್ಕಾರ ಶನಿವಾರ ಬಿಡುಗಡೆ ಮಾಡಿದೆ.

ಬೋಸ್‌ ಅವರ 119ನೇ ಜನ್ಮದಿನದ ಅಂಗವಾಗಿ ಕಡತಗಳನ್ನು ಬಿಡುಗಡೆ ಮಾಡಲಾಗಿದೆ. ಬೋಸ್‌ ಅವರಿಗೆ ಸಂಬಂಧಿಸಿದ ಕಡತಗಳನ್ನು www.netajipapers.gov.in/ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ.



ನ್ಯಾಷನಲ್‌ ಆರ್ಕೈವ್ಸ್‌ ಆಫ್‌ ಇಂಡಿಯಾ (ಎನ್‌ಎಐ) ಡಿಜಿಟಲ್‌ ರೂಪಕ್ಕೆ ತಂದಿರುವ 100 ಕಡತಗಳನ್ನು ಒಳಗೊಂಡ www.netajipapers.gov.in/ ಜಾಲತಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು.

ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು 25 ಕಡತಗಳನ್ನು ಡಿಜಿಟಲ್‌ ರೂಪದಲ್ಲಿ ಈ ಜಾಲತಾಣದಲ್ಲಿ ಬಿಡುಗಡೆ ಮಾಡಲು ಎನ್‌ಎಐ ಉದ್ದೇಶಿಸಿದೆ.

ಕೇಂದ್ರ ಸರ್ಕಾರ ಬೋಸ್‌ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಿಡುಗಡೆ ಮಾಡಿರುವುದನ್ನು ನೇತಾಜಿ ಕುಟುಂಬ ಸದಸ್ಯರು ಸ್ವಾಗತಿಸಿದ್ದಾರೆ.

ಬೇಡ ಎಂದಿದ್ದರು: ‘ನಾನು ಗೃಹ ಸಚಿವನಾಗಿದ್ದಾಗ ವೇಳೆ ಬೋಸ್‌ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಬಾರದು ಎಂದು ಅವರ ಕುಟುಂಬ ಸದಸ್ಯರು ಒತ್ತಡ ಹೇರಿದ್ದರು’ ಎಂದು ಎಲ್‌.ಕೆ.ಅಡ್ವಾಣಿ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.