ಶುಕ್ರವಾರ, ಜನವರಿ 17, 2020
20 °C

ನೇತಾಜಿ ಆದರ್ಶ ಪಾಲಿಸಲು ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಪ್ರತಿ ಯೊಬ್ಬರೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕು ಎಂದು ಕರ್ನಾಟಕ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಕೆ.ರಾಮಚಂದ್ರಪ್ಪ ಹೇಳಿದರು.

 

ಪಟ್ಟಣದ ಮಾಂಟ್ರಿಯಲ್ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸುಭಾಷ್ ಚಂದ್ರಬೋಸ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಯನ್ನು ಮಕ್ಕಳಿಗೆ ತಿಳಿಸುವುದರ ಮೂಲಕ ಅವರಲ್ಲಿ ರಾಷ್ಟ್ರಪ್ರೇಮ ಬೆಳಸುವ ಕಾರ್ಯ ಆಗಬೇಕಿದೆ ಎಂದು ತಿಳಿಸಿದರು.ಬಿಜೆಪಿ ಮುಖಂಡ ಬಿ.ವಿ.ಬೈರೇ ಗೌಡ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ.ವಿಜಯಕುಮಾರ್, ಮುಖ್ಯ ಶಿಕ್ಷಕಿ ಎಂ.ಮಂಜುಳಾ ಮತ್ತಿತರರು ಈ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)