ಮಂಗಳವಾರ, ಜೂನ್ 22, 2021
29 °C

ನೇತ್ರ ತಪಾಸಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ:  ಸೋಲಂಕಿ ಕಣ್ಣಿನ ಆಸ್ಪತ್ರೆಯು ಕೃಷ್ಣಬೈರೇಗೌಡ ಸ್ವಯಂ ಸೇವಕ ಸಂಘದ ಸಹಯೋಗದೊಂದಿಗೆ ಬ್ಯಾಟರಾಯನಪುರದ ವಿನಾಯಕ ನಗರದಲ್ಲಿ  ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಶಾಸಕ ಕೃಷ್ಣಬೈರೇಗೌಡ ಉದ್ಘಾಟಿಸಿದರು.ಶಿಬಿರದಲ್ಲಿ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಮತ್ತು ಹಿರಿಯರ ನಾಗರಿಕರ ಗುರುತಿನ ಚೀಟಿ ನೋಂದಣಿ ಕಾರ್ಯಕ್ರಮವಿತ್ತು.  ಕಣ್ಣಿನ ತೊಂದರೆಯಿದ್ದ 130 ಜನರಿಗೆ ಉಚಿತ ಕನ್ನಡಕ ವಿತರಿಸಲಾಯಿತು.ಇದೇ ಸಂದರ್ಭದಲ್ಲಿ 50 ಮಂದಿ ಹಿರಿಯ ನಾಗರಿಕರು ಗುರುತಿನ ಚೀಟಿಗಾಗಿ ಹೆಸರು ನೋಂದಾಯಿಸಿಕೊಂಡರು.ಮಾಜಿ ನಗರಸಭಾ ಅಧ್ಯಕ್ಷ ಶ್ರೀನಿವಾಸರಾಜು, ಜಕ್ಕೂರು ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಟಿ.ವೆಂಕಟರಾಮರೆಡ್ಡಿ, ಸಮಾಜ ಸೇವಕಿ ಮೀನಾಕ್ಷಿ ಶೇಷಾದ್ರಿ ಇತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.