ಮಂಗಳವಾರ, ಫೆಬ್ರವರಿ 18, 2020
28 °C

ನೇಪಾಳ: ಹೆಲಿಕಾಪ್ಟರ್ ಅಪಘಾತ- ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಠ್ಮಂಡು(ಐಎಎನ್ ಎಸ್): ನೇಪಾಳದಲ್ಲಿ ಭೂಕಂಪ ಸಂತ್ರಸ್ತರ ನೆರವಿಗೆ ಕಾರ್ಯಾಚರಣೆ ನಡೆಸುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಮಂಗಳವಾರ ಅಪಘಾತಕ್ಕೀಡಾಗಿ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಬಾಲಿಪಾಯಿಯಿಂದ 75 ಕಿ.ಮೀ. ದೂರದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ನೇಪಾಳ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಭೂಕಂಪ ಸಂತ್ರಸ್ತರ ನೆರವಿಗೆ ಕಾರ್ಯಾಚಾರಣೆ ನಡೆಸುತ್ತಿದ್ದ ಹೆಲಿಕಾಪ್ಟರ್ ಕಠ್ಮಂಡುವಿನಿಂದ ಸಿಂಧ್ ಪೌಲ್ ಚೌಕಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)