ನೇಮಕಾತಿಗೆ ಡಿವೈಎಫ್‌ಐ ಆಗ್ರಹ

7

ನೇಮಕಾತಿಗೆ ಡಿವೈಎಫ್‌ಐ ಆಗ್ರಹ

Published:
Updated:

ಮಡಿಕೇರಿ: ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ತಕ್ಷಣ ಭರ್ತಿ ಮಾಡಲು ಸರ್ಕಾರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಡಿವೈಎಫ್‌ಐ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.ನಗರದ ಕೋಟೆ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು `ಉದ್ಯೋಗ ಕೊಡಿ ಇಲ್ಲವೇ ನಿರುದ್ಯೋಗ ಭತ್ಯೆ ಕೊಡಿ' ಎಂದು ಘೋಷಣೆಗಳನ್ನು ಕೂಗಿದರು.ಡಿವೈಎಫ್‌ಐ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಮಾತನಾಡಿ,  ವಿದ್ಯಾವಂತ ಯುವಜನತೆ ಉದ್ಯೋಗ ಸಿಗದೇ ಹತಾಶರಾಗುತ್ತ್ದ್ದಿದಾರೆ. ಈ ಬಗ್ಗೆ ಸರ್ಕಾರಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಆರೋಪಿಸಿದರು.ಉದ್ಯೋಗ ನೀಡಿ ಇಲ್ಲದಿದ್ದರೆ ಇನ್ನಿತರ ರಾಜ್ಯಗಳಲ್ಲಿ ನಿರುದ್ಯೋಗ ಭತ್ಯೆ ನೀಡುತ್ತಿರುವಂತೆ ನಮ್ಮ ರಾಜ್ಯದಲ್ಲೂ ನಿರುದ್ಯೋಗಿಗಳಿಗೆ ಭತ್ಯೆ ನೀಡಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸರ್ಕಾರದ ಇಲಾಖೆಯಲ್ಲಿ 15 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ.ಚುನಾವಣೆ ಸಮಯದಲ್ಲಿ ನಿರುದ್ಯೋಗಿಗಳಿಗೆ ಕೆಲಸ ನೀಡುತ್ತೆವೆ. ಇಲ್ಲವಾದಲ್ಲಿ ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಿದ್ದ ಪಕ್ಷಗಳು ಈ ಬಗೆ ಗಮನ ಹರಿಸಲ್ಲ ಎಂದರು.ಸರ್ಕಾರವನ್ನು ಒತ್ತಾಯಿಸಿ ನೀಡಲಾದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಿವಶಂಕರ ಅವರಿಗೆ ಹಸ್ತಾಂತರಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry