ಮಂಗಳವಾರ, ಜನವರಿ 28, 2020
24 °C

ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ನೇರ ನೇಮಕಾತಿ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸಿರುತ್ತಾರೆ.ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲೆಗಳನ್ನೂ ಪರಿಶೀಲಿಸಿರುತ್ತಾರೆ.  ಡಿ.29ರ ಪ್ರಕಟಣೆಯಲ್ಲಿ ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳು ಸಾಕಷ್ಟು ಪ್ರಮಾಣದಲ್ಲಿ ಹಾಜರಾಗಿಲ್ಲ. ಅಂಥವರಿಗಾಗಿ ಜ.5 ರಂದು ಮತ್ತೆ ಪರಿಶೀಲನೆಗೆ ಹಾಜರಾಗುವಂತೆ ಸೂಚಿಸಲಾಗಿದೆ.ಹಾಜರಾಗದ ಪ್ರಾಂಶುಪಾಲರು ಮತ್ತು ಸಹಶಿಕ್ಷಕ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾರೆ. ಬೋಧಕೇತರ ಹುದ್ದೆಗಳಿಗೆ ಸಂಬಂಧಿಸಿದಂತೆ ಯಾವುದೇ ಪಟ್ಟಿ ನೀಡಿಲ್ಲ. ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗದೇ ಇರುವುದರಿಂದ ಖಾಲಿ ಬೀಳುವ ಹುದ್ದೆಗಳಿಗೆ ಯಾವ ರೀತಿ ನ್ಯಾಯ ಒದಗಿಸುತ್ತಾರೆ?ದಾಖಲೆ ಪರಿಶೀಲನೆಗೆ ಹಾಜರಾಗದವರ ಸ್ಥಾನಗಳಿಗೆ ಹೆಚ್ಚು ಅಂಕ ಪಡೆದ ಉಳಿದ ಅಭ್ಯರ್ಥಿಗಳಿಗೆ ಅವಕಾಶ ನೀಡಿ ಆಯ್ಕೆ ಪಟ್ಟಿ ಪ್ರಕಟಿಸಬೇಕು. ಈ ಮೂಲಕ ಪಾರದರ್ಶಕತೆ ಕಾಪಾಡಬೇಕು ಎಂದು ವಿನಂತಿಸುತ್ತೇವೆ.

ಪ್ರತಿಕ್ರಿಯಿಸಿ (+)