ನೇಮಕಾತಿ ಅಕ್ರಮ: ಆಯುಕ್ತರ ವಜಾಕ್ಕೆ ಆಗ್ರಹ

ಭಾನುವಾರ, ಮೇ 26, 2019
26 °C

ನೇಮಕಾತಿ ಅಕ್ರಮ: ಆಯುಕ್ತರ ವಜಾಕ್ಕೆ ಆಗ್ರಹ

Published:
Updated:

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಎಚ್.ಎನ್.ಕೃಷ್ಣ ಅವರನ್ನು ಮಾಹಿತಿ ಹಕ್ಕು ಆಯೋಗದ ಆಯುಕ್ತ ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಕಾರ್ಯಕರ್ತರು ಪ್ರತಿಭಟನ ನಡೆಸಿದರು.ಮೈಸೂರು, ಮಂಡ್ಯ, ಮದ್ದೂರು, ರಾಮನಗರ ಹಾಗೂ ಬಿಡದಿಗಳಲ್ಲಿ ಪ್ರತಿಭಟನಾ ಸಭೆಗಳನ್ನು ನಡೆಸಿದ ಕಾರ್ಯಕರ್ತರು ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿ ಕೃಷ್ಣ ವಿರುದ್ಧ ಘೋಷಣೆಗಳನ್ನು ಕೂಗಿದರು. `ಕೃಷ್ಣ ಲೋಕಸೇವಾ ಆಯೋಗದ ಅಧ್ಯಕ್ಷರಾಗಿದ್ದಾಗ ಕೆಎಎಸ್ ಹಾಗೂ ಇತರೆ ಹುದ್ದೆಗಳಿಗೆ ಅಕ್ರಮವಾಗಿ ನೇಮಕಾತಿ ನಡೆಸಿದ್ದಾರೆ. ಅಕ್ರಮ ನೇಮಕಾತಿ ಮಾಡಿರುವುದು ಈಗಾಗಲೇ ಸಾಬೀತಾಗಿದೆ.ಈ ಕುರಿತು ತನಿಖಾ ವರದಿ ನೀಡುವಂತೆ ಹೈಕೋರ್ಟ್ ಸಿಐಡಿಗೆ ಅೀಕ ಬಾರಿ ಗಡುವು ನೀಡಿತ್ತು. ಆದರೆ, ಅಧಿಕಾರಿಗಳು ಕಣ್ಣೊರೆಸುವ ತಂತ್ರ ಅನುಸರಿಸುತ್ತಿದ್ದಾರೆ. `1998, 1999 ಹಾಗೂ 2004ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು, ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಜೆ.ಶ್ರೀನಿವಾಸ್, ದಸಂಸ ಸಂಚಾಲಕ ಮಾವಳ್ಳಿ ಶಂಕರ್, ಸಮತಾ ಸೈನಿಕ ದಳದ ರಾಜ್ಯ ಘಟಕ ಅಧ್ಯಕ್ಷ ವೆಂಕಟಸ್ವಾಮಿ, ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಾಮಚಂದ್ರ ಇತರರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry