ಭಾನುವಾರ, ಜನವರಿ 19, 2020
20 °C

ನೇರ ತೆರಿಗೆ ಸಂಗ್ರಹ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಮಂದಗತಿ ಆರ್ಥಿಕ ಪ್ರಗತಿ ನಡುವೆಯೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರೆಗೆ ಒಟ್ಟಾರೆ ನೇರ ತೆರಿಗೆ ಸಂಗ್ರಹದಲ್ಲಿ ಶೇ 13.18ರಷ್ಟು ಹೆಚ್ಚಳ ಕಂಡುಬಂದಿದೆ.ಏಪ್ರಿಲ್‌, ನವೆಂಬರ್‌ ಅವಧಿಯಲ್ಲಿ ರೂ3.68 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹವಾಗಿದೆ. ಹಿಂದಿನ ಹಣಕಾಸು ವರ್ಷ ಇದೇ ಅವಧಿಯಲ್ಲಿ ರೂ3.25 ಲಕ್ಷ ಕೋಟಿ ಸಂಗ್ರಹವಾಗಿತ್ತು. ಈ ಬಾರಿ ಕಾರ್ಪೊರೇಟ್‌ ತೆರಿಗೆ ಸಂಗ್ರಹದಲ್ಲಿ ಶೇ 9.66, ವೈಯಕ್ತಿಕ ಆದಾಯ ತೆರಿಗೆ ಸಂಗ್ರಹದಲ್ಲಿ ಶೇ 19.60 ಮತ್ತು ಸಂಪತ್ತು ತೆರಿಗೆ ಸಂಗ್ರಹದಲ್ಲಿ ಶೇ 13.38ರಷ್ಟು ಹೆಚ್ಚಳ ಕಂಡುಬಂದಿದೆ.ಕೇಂದ್ರ ಸರ್ಕಾರ ಪ್ರಸಕ್ತ ಹಣಕಾಸು ವರ್ಷಕ್ಕೆ ರೂ6.68 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹದ ಗುರಿ ಇಟ್ಟುಕೊಂಡಿದೆ.

ಪ್ರತಿಕ್ರಿಯಿಸಿ (+)