ಅಬುಜಾ(ಐಎಎನ್ಎಸ್): ನೈಜೀರಿಯಾದ ಈಶಾನ್ಯ ರಾಜ್ಯ ಬೊರ್ನ್ನೋದಲ್ಲಿ ಆತ್ಮಹತ್ಯಾ ಬಾಂಬ್ ದಾಳಿಯಾಗಿದ್ದು, ಘಟನೆಯಲ್ಲಿ 12 ಜನ ಮೃತಪಟ್ಟಿದ್ದಾರೆ.

ಬಾಂಬ್ ದಾಳಿಗೆ ಬಲಿಯಾದವರ 12 ಶವ ಲಭ್ಯವಾಗಿವೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ 28 ಜನರನ್ನು ರಕ್ಷಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಭದ್ರತಾ ಸಿಬ್ಬಂದಿ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿ ಬುಧವಾರ ತಿಳಿಸಿದ್ದಾರೆ.

ಇಲ್ಲಿನ ಸ್ಥಳೀಯ ವಾರದ ಮಾರುಕಟ್ಟೆಗೆ ಪ್ರವೇಶಿಸಿದ್ದ ಐವರು ದಾಳಿಕೋರರ ಪೈಕಿ ಮೂವರು ಆತ್ಮಹತ್ಯೆ ಬಾಂಬ್ ದಾಳಿ ನಡೆಸಿದ್ದಾರೆ. ಇನ್ನೂ ಇಬ್ಬರನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.