ಗುರುವಾರ , ಮೇ 13, 2021
39 °C

`ನೈರ್ಮಲ್ಯಕ್ಕೆ ಒತ್ತು ನೀಡಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು: ತಾಲ್ಲೂಕಿನಾದ್ಯಂತ ಡೆಂಗೆ ಜ್ವರದ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ನಿಡಘಟ್ಟ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಶುಚಿತ್ವ ಕಾರ್ಯವನ್ನು ಚುರುಕುಗೊಳಿಸಬೇಕೆಂದು ನಿಡಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಅವರು ಪಿಡಿಒ ಶೀಲಾ ಅವರಿಗೆ ತಾಕೀತು ಮಾಡಿದರು.ಗ್ರಾಮದಲ್ಲಿನ ಅಶುಚಿತ್ವದ ವಿರೋಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿದ ಅವರು ಇಂದಿನಿಂದಲೇ ಗ್ರಾಮದ ಎಲ್ಲ ಚರಂಡಿಗಳ ಹೂಳು ತೆಗೆಸಿ ನೀರು ನಿಲ್ಲದಂತೆ ಎಚ್ಚರವಹಿಸಿ. ಸೊಳ್ಳೆಗಳ ನಿವಾರಣೆಗೆ ಫಾಗಿಂಗ್ ಕಾರ್ಯ ಕೈಗೊಳ್ಳಿ. ಅಲ್ಲದೇ ಕಸದ ವಿಲೇವಾರಿಗೆ ಹೆಚ್ಚಿನ ಗಮನಹರಿಸಿ ಎಂದು ಸಲಹೆ ನೀಡಿದರು.ಸದಸ್ಯ ಪ್ರಕಾಶ್ ಮಾತನಾಡಿ, ಗ್ರಾಮದ ಶುಚಿತ್ವ ರಕ್ಷಣೆ ಗ್ರಾಮ ಪಂಚಾಯಿತಿಯ ಹೊಣೆಯಾಗಿದ್ದು, ಈ ಕೆಲಸವನ್ನು ಗ್ರಾಮಸ್ಥರಿಂದ ಹೇಳಿಸಿಕೊಂಡು ಮಾಡಬೇಕಾದ ಪರಿಸ್ಥಿತಿಗೆ ಬಂದಿರುವುದು ಅವಮಾನಕರ. ಶುಚಿತ್ವಕ್ಕೆ ಕೂಡಲೇ ಕಾರ್ಯ ಪ್ರವೃತ್ತರಾಗಿ ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಸದಸ್ಯ ಬೋರೇಗೌಡ ಮಾತನಾಡಿ, ಗ್ರಾಮದಲ್ಲಿ ರಾಜೀವ್‌ಗಾಂಧಿ ಸೇವಾ ಕೇಂದ್ರದ ಕಟ್ಟಡ ಇನ್ನೂ ಪೂರ್ಣಗೊಂಡಿಲ್ಲವೇಕೆ? ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲೂ ಅನಗತ್ಯ ವಿಳಂಬ ಮಾಡಲಾಗುತ್ತಿದೆ. ಕೂಡಲೇ ಈ ಕುರಿತು ಸಭೆಗೆ ಅಗತ್ಯ ಮಾಹಿತಿ ಒದಗಿಸಿ ಎಂದು ಆಗ್ರಹಿಸಿದರು.ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರಸ್ವಾಮಿ, ಸದಸ್ಯರಾದ ರಾಜಶೇಖರ್, ಸಿದ್ದರಾಜು, ದೇವರಾಜು, ರುದ್ರಮ್ಮ, ವೆಂಕಟಮ್ಮ, ಕುಮಾರ್ ಸೇರಿದಂತೆ ಸಿಬ್ಬಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.