ಭಾನುವಾರ, ಮೇ 16, 2021
23 °C

ನೈಸರ್ಗಿಕ ಸಂಪನ್ಮೂಲ ಸಂರಕ್ಷಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಚಿನ್ನದ ಮೊಟ್ಟ ಇಡುವ ಕೋಳಿಯಂತೆ ಪ್ರಕೃತಿ ಎಂದು ಗುಲ್ಬರ್ಗದ ಕೃಷಿ ವಿವಿ ಕೇಂದ್ರದ ಪ್ರಾಧ್ಯಾಪಕ ಡಾ.ರವೀಂದ್ರ ಪಾಟೀಲ ಅಭಿಪ್ರಾಯಪಟ್ಟರು.ದೊಡ್ಡಪ್ಪ ಅಪ್ಪ ವಸತಿ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಭಾನುವಾರ ಆಯೋಜಿಸಿದ್ದ ಪರಿಸರ ದಿನಾಚರಣೆಯನ್ನು ಸಸಿ ನಡೆಸುವ ಮೂಲಕ ಉದ್ಘಾಟಿಸಿ  ಮಾತನಾಡಿದರು.ದಿನಕ್ಕೊಂದು ಚಿನ್ನದ ಮೊಟ್ಟ ಇಡುವ ಕೋಳಿಯನ್ನು ಆಸೆಬುರುಕರು ಎಲ್ಲ ಮೊಟ್ಟೆಗಳನ್ನು ಒಂದೇ ಬಾರಿಗೆ ಪಡೆಯಬೇಕು ಎಂದು ಕೊಯ್ದ ಹಾಗೆ ಇಂದು ನಾವು ಎಲ್ಲ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. ಮುಂದೊಂದು ದಿನ ನಮ್ಮ ಪೀಳಿಗೆ ಅನ್ನ ನೀರಿಗಾಗಿ ಪರದಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಪ್ರಕೃತಿ ಸಂಪನ್ಮೂಲಗಳನ್ನು ಹಿತಮಿತವಾಗಿ ಬಳಸಿ ಮುಂದಿನ ಪೀಳಿಗೆಗೆ ಕಾಯ್ದಿರಿಸು ಮೂಲಕ ನಮ್ಮ ಪೂರ್ವಜರ ಋಣ ತೀರಿಸಬೇಕು ಎಂದು ಸಲಹೆ ನೀಡಿದರು.ವಿದ್ಯಾರ್ಥಿಗಳಾದ ರೂಪಾಲಿ, ನಾಗರಾಜ ಬಿ, ರಾಜೇಶ್ರೀ ಜಿ.ಎಚ್ ಅನಿಸಿಕೆ ವ್ಯಕ್ತಪಡಿಸಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ರಾಮಕೃಷ್ಣಾ ರೆಡ್ಡಿ, ಕಾಲೇಜಿನ ಪ್ರಾಚಾರ್ಯ ವಿನೋದಕುಮಾರ ಎಲ್. ಪತಂಗೆ ಇದ್ದರು.ಪೂಜಾ ಕೆ.ಎಂ. ಸ್ವಾಗತಿಸಿದರು, ಶಶಿಕಲಾ ನಿರೂಪಿಸಿದರು. ಅಕ್ಷಯ ಎನ್.ಜಿ. ಪರಿಚಯಿಸಿದರು. ರಾಜಶ್ರೀ ಹಿರೇಮಠ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.