ಬುಧವಾರ, ಏಪ್ರಿಲ್ 21, 2021
23 °C

ನೈಸ್ ರಸ್ತೆಯಲ್ಲಿ ಚಿರತೆ ಮರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನಕಪುರ ಮುಖ್ಯರಸ್ತೆಯಿಂದ ಬನ್ನೇರುಘಟ್ಟ ರಸ್ತೆಗೆ ಸಂಪರ್ಕ ಕಲ್ಪಿಸುವ ‘ನೈಸ್’ ರಸ್ತೆಯಲ್ಲಿ ಒಂದೂವರೆ ವರ್ಷದ ಹೆಣ್ಣು ಚಿರತೆ ಮರಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.ಈ ಭಾಗದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಿದ್ದು, ಜನವರಿ 31ರಂದು ಇದೇ ರಸ್ತೆಯಲ್ಲಿ ಗಂಡು ಚಿರತೆಯೊಂದು ವಾಹನಕ್ಕೆ ಸಿಕ್ಕಿ ಮೃತಪಟ್ಟಿತ್ತು.‘ಚಿರತೆ ಮರಿ ಭಾನುವಾರ ರಾತ್ರಿ ರಸ್ತೆ ದಾಟುವ ಸಂದರ್ಭದಲ್ಲಿ ವಾಹನ ಡಿಕ್ಕಿ ಹೊಡೆದಿದ್ದು, ಅದರ ಮುಂಭಾಗದ ಕಾಲಿಗೆ ಪೆಟ್ಟು ಬಿದ್ದಿದೆ. ಅಲ್ಲದೇ ಹೃದಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಉಳಿದಂತೆ ದೇಹದ ಯಾವುದೇ ಭಾಗದಲ್ಲಿ ಗಾಯದ ಗುರುತುಗಳಿಲ್ಲ’ ಎಂದು ವಲಯ ಅರಣ್ಯಾಧಿಕಾರಿ ಶಿವರಾಮಯ್ಯ ತಿಳಿಸಿದರು.ಸ್ಥಳಕ್ಕೆ ಭೇಟಿ ನೀಡಿದ್ದ ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ಸಮಿತಿಯ ಸದಸ್ಯರು ‘ವಾಹನ ಡಿಕ್ಕಿ ಹೊಡೆದಿರುವುದರಿಂದ ಚಿರತೆ ಮರಿ ಸಾವನ್ನಪ್ಪಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಚಿರತೆಯ ದೇಹದ ಯಾವುದೇ ಭಾಗದಲ್ಲಿ ಗಾಯಗಳಾಗಿಲ್ಲ. ಅದರ ದೇಹವು ನೀಲಿ ಬಣ್ಣಕ್ಕೆ ತಿರುಗಿದ್ದು, ವಿಷವಿಟ್ಟು ಕೊಂದಿರುವ ಸಾಧ್ಯತೆ ಇದೆ. ಮೃತಪಟ್ಟ ಚಿರತೆ ಮರಿಯನ್ನು ರಸ್ತೆಗೆ ಹಾಕಿ ಅಪಘಾತದಲ್ಲಿ ಸಾವನ್ನಪ್ಪಿದೆ ಎಂದು ಬಿಂಬಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ತನಿಖೆಆಗಬೇಕು’ ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.