ಗುರುವಾರ , ಮೇ 19, 2022
23 °C

ನೊಂದ ರೈತರಿಗೆ ನೆರವಾಗಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳವಳ್ಳಿ: ಇಳೆಗೆ ಮಳೆಗೆ ತಂಪು ಮಾಡುವ ರೀತಿ, ರೈತರ, ನೊಂದವರಿಗೆ  ಪತ್ರಕರ್ತರು ನೆರವಾಗಬೇಕು ಎಂದು ಸಾಹಿತಿ ನಾಗತೀಹಳ್ಳಿರಮೇಶ್ ತಿಳಿಸಿದರು.



ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು.



ಹಾರೋಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಜಯಶಂಕರ್(ಹಲಗೂರು) ಅವರು ಮಾತನಾಡಿ ಪತ್ರಕರ್ತನಿಗೆ ಹಲವು ಸವಾಲುಗಳಿದ್ದು ಅವುಗಳನ್ನು ದಾಟಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಮಾಜಿಕ ಮೌಲ್ಯಗಳನ್ನು ಒಳಗೊಂಡ ಲೇಖನಗಳು ಬರಬೇಕು ಇದು ಮುದ್ರಣ ಮಾಧ್ಯಮದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.



ಡಿವೈಎಸ್ಪಿ ಜಿ.ಕೆ. ಚಿಕ್ಕಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಈ ಭಾಗದ ಜನರು ಪ್ರಕೃತಿ ನೀಡಿರುವ ಸಂಪತ್ತನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಅಲ್ಲದೆ ಮಹಿಳೆಯರ ಮೇಲೆ ಹೆಚ್ಚು ದೌರ್ಜನ್ಯ ಹಾಗೂ ಕಿರುಕುಳ ನಡೆಯುತ್ತಿದ್ದು ಇದನ್ನು ತಡೆಯುವ ಯತ್ನವನ್ನು ಎಲ್ಲರೂ ಮಾಡಲು ಮುಂದಾಗಬೇಕು ಎಂದರು.  ಪತ್ರಕರ್ತ ಎ.ಎಸ್. ಪ್ರಭಾಕರ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಖಜಾನಾಧಿಕಾರಿ ಮಂಜುನಾಥ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಾಗನೂರು  ಎಂ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಗೌರವ ಅಧ್ಯಕ್ಷ ಸಿದ್ದಲಿಂಗಸ್ವಾಮಿ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.