ಭಾನುವಾರ, ಮೇ 22, 2022
26 °C

ನೋಂದಣಿ ಮಾಡಿಸಲು ಕಾರ್ಮಿಕರಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗಾಗಿ  ಅನೇಕ ಯೋಜನೆಗಳಳಿದ್ದು, ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸುವ ಮೂಲಕ ಈ ಸೌಲಭ್ಯಗಳನ್ನು ಪಡೆಯಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ. ಶ್ರೀಧರರಾವ್ ಸಲಹೆ ನೀಡಿದರು.ನಗರದಲ್ಲಿ ಭಾನುವಾರ ಕಟ್ಟಡ ಕಾರ್ಮಿಕರಿಗಾಗಿ ಏರ್ಪಡಿಸಲಾಗಿದ್ದ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.1996ರಲ್ಲಿ ರೂಪುಗೊಂಡಿರುವ ಕಟ್ಟಡ ನಿರ್ಮಾಣ ಕಾರ್ಮಿಕರ ಕಾಯ್ದೆಯು ರಾಜ್ಯದಲ್ಲಿ 2006ರಲ್ಲೇ ಅನುಷ್ಠಾನ ಗೊಂಡಿದೆ. ನೋಂದಾಯಿತ ಕಾರ್ಮಿಕರಿಗೆ ಆರೋಗ್ಯ ವಿಮೆ, ಚಿಕಿತ್ಸೆಗೆ ಧನಸಹಾಯ, ಅಂಗವೈಕಲ್ಯಕ್ಕೆ ಪಿಂಚಣಿ, ಎಕ್ಸ್ ಗ್ರೇಷಿಯಾ, ಅಪಘಾತ ಪರಿಹಾರ, ಕೆಲಸ ಮಾಡುವಾಗ ಮೃತಪಟ್ಟರೆ ಅಂತ್ಯಕ್ರಿಯೆಗೆ ಧನಸಹಾಯ, ಮಹಿಳೆಯರಿಗೆ ಹೆರಿಗೆ ಭತ್ಯೆ, ವಸತಿ ಯೋಜನೆ, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯ ನೀಡಲಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.ಸಾವಿರಾರು ವರ್ಷಗಳಿಂದ ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರು  ಅಸಂಘಟಿತರಾಗಿದ್ದು, ಸಾಮಾಜಿಕ ಭದ್ರತೆಯೇ ಇಲ್ಲದಂತಾಗಿದೆ. ನೋಂದಣಿ ಮಾಡಿಸಿದ ಕಾರ್ಮಿಕರ ಕಲ್ಯಾಣಕ್ಕಾಗಿ ಮಂಡಳಿ ರಚಿಸಲಾಗಿದ್ದು ಸದುಪಯೋಗ ಪಡೆಯಬೇಕು ಎಂದು ಜಂಟಿ ಕಾರ್ಮಿಕ ಆಯುಕ್ತ ವಸಂತಕುಮಾರ್ ಇಟ್ಟಣಗಿ ಅವರು ತಿಳಿಸಿದರು.ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ವಿ.ವಿ. ಅಂಗಡಿ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಮಾತನಾಡಿದರು. ಕಾರ್ಮಿಕ ಮುಖಂಡ ಎ.ಎಸ್. ಮಳೇಬೆನ್ನೂರ ಅವರನ್ನು ಇದೇ ವೇಳೆ ಸತ್ಕರಿಸಿ ಗೌರವಿಸಲಾಯಿತು. ವಕೀಲ ಕೆ. ನಾಗಭೂಷಣರಾವ್ ಉಪನ್ಯಾಸ ನೀಡಿದರು.ಜಿಲ್ಲಾ ನ್ಯಾಯಾಧೀಶೆ ಎಂ.ಜಿ. ಉಮಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ವಕೀಲರ ಸಂಘದ ಅಧ್ಯಕ್ಷ ಎ.ಜಿ. ಶಿವಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎರ‌್ರೆಗೌಡ ಕಾರ್ಯಕ್ರಮ ನಿರೂಪಿಸಿದರು. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೊಸಮನಿ ಸಿದ್ದಪ್ಪ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.