ವಿಜಾಪುರ: ನ್ಯಾನೊ ತಂತ್ರಜ್ಞಾನದ ಮೂಲಕ ಮಾರಕ ಕ್ಯಾನ್ಸರ ಸೇರಿದಂತೆ ಅನೇಕ ರೋಗಗಳನ್ನು ಬಹಳ ಪರಿಣಾಮಕಾರಿಯಾಗಿ ಅಡ್ಡ ಪರಿಣಾಮಗಳಿಲ್ಲದೇ ಗುಣಪಡಿಸಬಹುದು ಎಂದು ಖ್ಯಾತ ವಿಜ್ಞಾನಿ ಹಾಗೂ ಭಾರತೀಯ ಔಷಧ ಶಾಸ್ತ್ರ ಸಂಸ್ಥೆಯ ಅಧ್ಯಕ್ಷ ಡಾ.ಪ್ರಕಾಶ ದಿವಾನ್ ಹೇಳಿದರು.

ಇಲ್ಲಿಯ ಬಿ.ಎಲ್.ಡಿ.ಇ. ಸಂಸ್ಥೆಯ ಫಾರ್ಮಸಿ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಆರೋಗ್ಯ ಕ್ಷೇತ್ರದಲ್ಲಿ ನ್ಯಾನೊ ತಂತ್ರಜ್ಞಾನದ ಉಪಯೋಗಳು ಕುರಿತ ರಾಷ್ಟ್ರೀಯ ವಿಚಾರಣ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ನಿರ್ಧಿಷ್ಠ ಅಂಗಾಗಳಲ್ಲಿ ಔಷಧ ಪ್ರಸವಿಸುವ ನ್ಯಾನೊ ತಂತ್ರಜ್ಞಾನ, ಪ್ರಸ್ತುತ ಕ್ವಾಂಟಂ ಡಾಟ್ ಇಮೇಜಿಂಗ್, ನ್ಯಾನೊ ಟ್ಯೂಬ್ ಇತ್ಯಾದಿಗಳ ಸಂಶೋಧನೆಗೆ ಹೆಚ್ಚಿನ ಆದ್ಯತೆಗಳನ್ನು ನೀಡಲಾಗುತ್ತಿದೆ.

ನ್ಯಾನೊ ತಂತ್ರಜ್ಞಾನವು ವೈದ್ಯಕೀಯ ಲೋಕದಲ್ಲಿ ಹೊಸ ಕ್ರಾಂತಿಯನ್ನು ತಂದಿದ್ದು, ರೋಗ ಪತ್ತೆ, ರೋಗ ತಡೆಯುವಿಕೆ ಹಾಗೂ ಚಿಕಿತ್ಸಾ ವಿಭಾಗಗಳಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿದೆ. ಭಾರತವು ನ್ಯಾನೊ ತಂತ್ರಜ್ಞಾನ ಕ್ಷೇತ್ರದಲ್ಲಿ ಉಳಿದ ಮುಂದುವರೆದ ದೇಶಗಳಂತೆ ದಾಪುಗಾಲು ಇಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದರು.

ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯಿಂದ ಹೆಚ್ಚಿನ ಆರ್ಥಿಕ ನೆರವನ್ನು ಆರೋಗ್ಯ ಕ್ಷೇತ್ರದಲ್ಲಿ ನ್ಯಾನೊ ತಂತ್ರಜ್ಞಾನ ಸಂಶೋಧನೆಗಳಿಗಾಗಿ ನೀಡುತ್ತಿದ್ದು, ಇಲ್ಲಿನ ಯುವ ಪ್ರತಿಭಾವಂತರು ಈ ನೆರವನ್ನು ಪಡೆದು ಹೆಚ್ಚಿನ ಸಂಶೋಧನೆ ಮಾಡಬೇಕು. ಆ ಸಂಶೋಧನೆಗಳು ಕೇವಲ ಪುಸ್ತಕದ ವಸ್ತುಗಳಾಗದೇ ಜನಸಾಮಾನ್ಯರ ಆರೋಗ್ಯ ತೊಂದರೆಗಳಿಗೆ ಪರಿಹಾರ ದೊರೆಯುವಂತಾಗಬೇಕು ಎಂದರು.

ಬಿ.ಎಲ್.ಡಿ.ಇ. ಅಧ್ಯಕ್ಷ, ಶಾಸಕ ಎಂ.ಬಿ. ಪಾಟೀಲ ಮಾತನಾಡಿ, `ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಉದ್ದೇಶದಿಂದ ಈ ರೀತಿಯ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗುತ್ತಿದೆ~ ಎಂದರು.

ಬಿ.ಎಲ್.ಡಿ.ಇ. ಡೀಮ್ಡ ವಿ.ವಿ ಕುಲಪತಿ ಡಾ.ಬಿ.ಜಿ. ಮೂಲಿಮನಿ, ಭಾರತೀಯ ವೈದ್ಯ ಪದ್ಧತಿಯಲ್ಲಿರುವ ಭಸ್ಮದಂತಹ ಔಷಧಿಗಳು ಹೆಚ್ಚಿನ ಪರಿಣಾಮಕಾರಿ ಕೆಲಸ ಮಾಡುತ್ತಿವೆ. ಅಂತಹ ಪ್ರಯೋಗಳನ್ನು ನ್ಯಾನೊ ತಂತ್ರಜ್ಞಾನದ ಮೂಲಕ ಅಳವಡಿಸಿದರೆ ಇನ್ನೂ ಹೆಚ್ಚಿನ ಪರಿಣಾಮ ನಿರೀಕ್ಷಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಇಲ್ಲಿನ ಆರ್ಯುವೇದ ವೈದ್ಯರು ಕಾರ್ಯನಿರ್ವಹಿಸಬೇಕು ಎಂದರು.

ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ.ಆರ್.ಸಿ. ಬಿದರಿ, ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ.ಎನ್.ವಿ. ಕಲ್ಯಾಣಿ, ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಡಾ.ರಾಘವೇಂದ್ರ ಕುಲಕರ್ಣಿ ವೇದಿಕೆಯಲ್ಲಿದ್ದರು. ರಾಷ್ಟ್ರದ ವಿವಿಧ ಭಾಗಗಳ 500ಕ್ಕೂ ಹೆಚ್ಚು ಪ್ರತಿನಿಧಿಗಳು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು. ನ್ಯಾನೊ ತಂತ್ರಜ್ಞಾನದ ವಿಷಯದ ಮೇಲೆ 75 ಪ್ರಬಂಧ ಮಂಡಿಸಲಾಯಿತು.

ನಿಡೋಣಿ: ಪ್ರತಿಭಟನೆ ಇಂದು
ವಿಜಾಪುರ: ತಾಲ್ಲೂಕಿನ ನಿಡೋಣಿ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದ್ದು ಅದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇದೇ 4ರಂದು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ತಾಲ್ಲೂಕು ಪ್ರಧಾನ ಸಂಚಾಲಕ ಸಂಜು ಕಂಬಾಗಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.