ನ್ಯಾ.ಪಾಟೀಲ್‌್ ಸಮಿತಿ ಶಿಫಾರಸು ಜಾರಿಗೆ ಆಗ್ರಹ

7

ನ್ಯಾ.ಪಾಟೀಲ್‌್ ಸಮಿತಿ ಶಿಫಾರಸು ಜಾರಿಗೆ ಆಗ್ರಹ

Published:
Updated:

ಬೆಂಗಳೂರು: ‘ಅಂಗನವಾಡಿ ಕೇಂದ್ರಗಳ ಸಮಗ್ರ ಅಭಿವೃದ್ಧಿ ಹಾಗೂ ಅವುಗಳ ಸರ್ವತೋಮುಖ ಪ್ರಗತಿಯ ಬಗ್ಗೆ ನ್ಯಾಯಮೂರ್ತಿ ಎನ್‌.ಕೆ.ಪಾಟೀಲ್‌ ನೇತೃತ್ವದ ಉನ್ನತ ಸಮಿತಿಯು ಸಲ್ಲಿಸಿ ರುವ ವರದಿಯಲ್ಲಿನ ಅಂಶಗಳನ್ನು ಶೀಘ್ರ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಅಂಗನವಾಡಿ ಕಾರ್ಯ ಕರ್ತೆಯರ ಮಹಾಮಂಡಳಿಯ ಅಧ್ಯಕ್ಷ ಜಿ.ಆರ್‌.ಶಿವಶಂಕರ್‌ ಒತ್ತಾಯಿಸಿದರು.ಗುರುವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 64,518 ಅಂಗನವಾಡಿ  ಕೇಂದ್ರಗಳಿವೆ. ಅದರಲ್ಲಿ 58,317 ಅಂಗನವಾಡಿಗಳು ಗ್ರಾಮೀಣ ಭಾಗದಲ್ಲಿವೆ. ಗ್ರಾಮೀಣ ಪ್ರದೇಶ ಗಳಲ್ಲಿರುವ ಮಕ್ಕಳ ಅಪೌಷ್ಠಿಕತೆಯನ್ನು ನಿವಾರಿಸಲು ಮತ್ತು ಅಂಗನವಾಡಿಗಳ ಅಭಿವೃದ್ಧಿಗಾಗಿ  ವರದಿಯಲ್ಲಿರುವ ಶಿಪಾ ರಸ್ಸುಗಳನ್ನು  ಶೀಘ್ರ ಜಾರಿಗೊಳಿಸ ಬೇಕಾದ ಅಗತ್ಯವಿದೆ ಎಂದರು.ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಕೇವಲ ಪೂರಕ ಪೌಷ್ಠಿಕ ಅಹಾರವನ್ನು ಮಾತ್ರ ನೀಡಲಾಗುತ್ತಿದ್ದು,  ಅಂಗನ ವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ಬೆಳಿಗ್ಗೆ 9.30ರಿಂದ ಸಂಜೆ 4 ಗಂಟೆಯ ವರೆಗೆ ನಿಗದಿಪಡಿಸಲಾಗಿದೆ. ಈ ಅವಧಿ ಯಲ್ಲಿ ಮಕ್ಕಳಿಗೆ ಸಮರ್ಪಕ ಆಹಾರ ದೊರೆಯುವುದಿಲ್ಲ. ಇದರಿಂದ ಮಕ್ಕಳ ಅಪೌಷ್ಠಿಕತೆ ಇನ್ನೂ ಹೆಚ್ಚಾಗಲಿದೆ ಎಂದು ದೂರಿದರು.ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಕುಟುಂಬಕ್ಕೆ ಪಡಿತರ ಚೀಟಿ ನೀಡಬೇಕು, ಪಡಿತರ ಚೀಟಿ ವಿತರಣೆ ನಿರ್ವಹಣೆ ಜವಾಬ್ದಾರಿಯನ್ನು ಪಂಚಾ ಯಿತಿ ಅಧಿಕಾರಿ, ಜಿಲ್ಲಾಧಿಕಾರಿ ಮತ್ತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ವಹಿಸಬೇಕು,   ಅಂಗನವಾಡಿಗಳ ಕಾರ್ಯ ನಿರ್ವಹಣೆಯನ್ನು ಪರಿಶೀಲಿ ಸಲು ಪ್ರಾದೇಶಿಕ ವಿಚಕ್ಷಣಾ ದಳವನ್ನು ಸ್ಥಾಪಿಸಬೇಕು, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅಂಗನವಾಡಿಗಳಿಗೆ ಪ್ರತ್ಯೇಕ ಅನುದಾನ ನೀಡಬೇಕು, ಅಂಗನವಾಡಿ ಮಕ್ಕಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ವೈದ್ಯ ಕೀಯ ತಪಾಸಣೆಗೆ ಒಳಪಡಿಸ ಬೇಕು ಮಕ್ಕಳಿಗೆ ಪ್ರಾದೇಶಿಕ ಪೌಷ್ಠಿಕ ಆಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂಬ ವರದಿಯಲ್ಲಿನ ಅಂಶಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.ರಾಜ್ಯದಲ್ಲಿ ಸುಮಾರು ಐದು ಸಾವಿರಕ್ಕೂ ಅಧಿಕ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ಅಪೌಷ್ಠಿಕತೆಯನ್ನು ನಿವಾರಿಸಲು ಸರ್ಕಾರ ಪೂರ್ಣಪ್ರಮಾಣದ ಆಹಾರವನ್ನು ನೀಡಬೇಕು. ಅಂಗನವಾಡಿ ವೇಳಾಪಟ್ಟಿಯನ್ನು 9.30ರಿಂದ 4ಗಂಟೆಗೆ ಬದಲಾಗಿ ಮಧ್ಯಾಹ್ನ 1.30ರ ವರೆಗೆ ನಿಗದಿ ಮಾಡಬೇಕು ಎಂದು ಹೇಳಿದರು.ಈ ಅಂಶಗಳ ಜಾರಿಗೆ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಂಡಳಿಯ ಕಾರ್ಯದರ್ಶಿ ನಾಗರತ್ನ ಮತ್ತಿತರರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry