ಮಂಗಳವಾರ, ಮೇ 11, 2021
26 °C
ತಾ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ

ನ್ಯಾಯಬೆಲೆ ಅಂಗಡಿಯಲ್ಲಿ ಅನ್ಯಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಮವಾರಪೇಟೆ: ನ್ಯಾಯಬೆಲೆ ಅಂಗಡಿಗಳು ಈಗ ಅನ್ಯಾಯ ಬೆಲೆ ಅಂಗಡಿಗಳಾಗಿವೆ. ತೂಕದಲ್ಲಿ ಅಪಾರ ಅನ್ಯಾಯ ನಡೆದಿದ್ದು, ಪ್ರತಿ ಕೆಜಿ ಸಕ್ಕರೆ, ಅಕ್ಕಿ, ಗೋದಿಯಲ್ಲಿ 800 ಗ್ರಾಂ ಮಾತ್ರ ನೀಡುತ್ತಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ಆರ್. ಸುರೇಶ್ ದೂರಿದರು.

ಪಟ್ಟಣದಲ್ಲಿ ಗುರುವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.ಈ ಬಗ್ಗೆ ಅಧಿಕಾರಿಗಳ ಬಳಿ ದೂರು ನೀಡಿದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಮಿಷನ್ ದಂಧೆಯ ಪರಿಣಾಮ ಈ ಕೃತ್ಯಗಳು ರಾಜ ರೋಷವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ನಿರೀಕ್ಷಕ ರಾಜೇಂದ್ರಪ್ರಸಾದ್, ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ. ಕೂಡಲೇ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.ಸದಸ್ಯ ಸತೀಶ್ ಮಾತನಾಡಿ, ತಾಲ್ಲೂಕು ಪಂಚಾಯಿತಿಯಲ್ಲಿ ಅಧಿಕಾರಿಗಳು ಕೆಲವು ಸದಸ್ಯರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.ಸದಸ್ಯ ವಿ.ಕೆ. ಲೋಕೇಶ್ ಮಾತನಾಡಿ, ಮಳೆ ಹೆಚ್ಚಾದರೆ ನೆಲ್ಲಹುದಿಕೇರಿಯಲ್ಲಿ ಕಾವೇರಿ ಹೊಳೆ ಉಕ್ಕಿ ಹರಿಯುತ್ತದೆ. ರಸ್ತೆ ಸಂಪರ್ಕ ಕಡಿತಗೊಳ್ಳುವ ಸಂಭವವಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಪಡಿತರ ಸಾಮಾಗ್ರಿಗಳು ಹಾಗೂ ಸಿಮೆಎಣ್ಣೆ ಅಲ್ಲಿನ ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ವಿವಿಧ ವಿಷಯಗಳ ಕುರಿತು ಅಧಿಕಾರಿಗಳು ಹಾಗೂ ಸದಸ್ಯರ ನಡುವೆ ಚರ್ಚೆ ನಡೆಯಿತು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಿ.ಬಿ. ಸೋಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಕೆ.ವಿ. ರಾಣಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಡಿ.ಎಸ್. ಪೊನ್ನಪ್ಪ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.