ನ್ಯಾಯಾಂಗ ಬಂಧನಕ್ಕೆ ಸುರೇಂದ್ರ ಬಾಬು

7

ನ್ಯಾಯಾಂಗ ಬಂಧನಕ್ಕೆ ಸುರೇಂದ್ರ ಬಾಬು

Published:
Updated:

ಬೆಂಗಳೂರು:  ಕಿರುತೆರೆ ನಟಿ ಹೇಮಶ್ರೀ ಕೊಲೆ ಪ್ರಕರಣ ಸಂಬಂಧ ನಗರ ಪೊಲೀಸರು ಬಂಧಿಸಿದ್ದ ಸುರೇಂದ್ರ ಬಾಬು ಅವರನ್ನು ನವೆಂಬರ್ 3 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ ಒಂದನೇ ಎಸಿಎಂಎಂ ನ್ಯಾಯಾಲಯ ಶನಿವಾರ ಆದೇಶಿಸಿದೆ.



ಆರೋಪಿಯ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಸುರೇಂದ್ರಬಾಬುವನ್ನು ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯನ್ನು ನ.3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ನಂತರ ಪೊಲೀಸರು ಆರೋಪಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry