ಶನಿವಾರ, ಮೇ 15, 2021
26 °C

ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಆಪ್ತ ಸಹಾಯಕ ಮೆಹಫೂಜ್ ಅಲಿಖಾನ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಮೇ 10ರವರೆಗೆ ವಿಸ್ತರಿಸಿದೆ.ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂದು ಸಿಬಿಐ ಅಧಿಕಾರಿಗಳು ಮಾಡಿದ ಮನವಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಎಂ. ಅಂಗಡಿ ಅವರು ಪುರಸ್ಕರಿಸಿ ಆದೇಶ ನೀಡಿದರು. ಜಾಮೀನು ಕೋರಿ ರೆಡ್ಡಿ ಮತ್ತು ಅಲಿಖಾನ್ ಅವರು ಸಲ್ಲಿಸಿದ್ದ ಅರ್ಜಿಯ ಮನವಿ ಕುರಿತ ವಿಚಾರಣೆಯನ್ನೂ ನ್ಯಾಯಾಧೀಶರು ಮೇ 10ಕ್ಕೆ ಮುಂದೂಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.