ಗುರುವಾರ , ಮೇ 19, 2022
20 °C

ನ್ಯಾಯಾಧೀಶರಿಗೆ ಲಂಚ ಆರೋಪ: ರಾಜಕೀಯಪ್ರೇರಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಸಿಬಿಐ ಬಂಧಿಸಿರುವ ಮಾಜಿ ಸಚಿವ ಜಿ.ಜನಾರ್ದನರೆಡ್ಡಿ ಅವರಿಗೆ ಜಾಮೀನು ಪಡೆಯಲು ನ್ಯಾಯಾಧೀಶರಿಗೆ ಲಂಚ ನೀಡಲಾಗಿದೆ ಎನ್ನಲಾದ ಪ್ರಕರಣ ಸಂಪೂರ್ಣ ರಾಜಕೀಯ ಪ್ರೇರಿತ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಮಂಗಳವಾರ ಇಲ್ಲಿ ಆರೋಪಿಸಿದರು.~ಈ ಪ್ರಕರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ. ಸಿಬಿಐ ನ್ಯಾಯಾಧೀಶ ಪಟ್ಟಾಭಿರಾಮರಾವ್ ಅವರ ಪುತ್ರನ ಬ್ಯಾಂಕ್ ಲಾಕರ್‌ನಲ್ಲಿ ಕೋಟ್ಯಂತರ ರೂಪಾಯಿ ಹಣ ದೊರೆತಿರುವುದಕ್ಕೂ, ಜನಾರ್ದನರೆಡ್ಡಿಗೆ ಜಾಮೀನು ದೊರೆತಿರುವುದಕ್ಕೂ ತಾಳೆ ಹಾಕಲಾಗುತ್ತಿದೆ. ಆದರೆ, ಈ ಕುರಿತ ಯಾವುದೇ ಬೆಳವಣಿಗೆಗಳ ಬಗ್ಗೆ ನನಗೆ ಮಾಹಿತಿಯಿಲ್ಲ. ಅದಕ್ಕೆ ನಾವು ಕಾರಣವಲ್ಲ~ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.~ಜನಾರ್ದನರೆಡ್ಡಿ ಜಾಮೀನಿಗೆ ಸಂಬಂಧಿಸಿದಂತೆ ವಕೀಲರೊಂದಿಗೆ ಚರ್ಚಿಸಲು ಹೈದರಾಬಾದ್‌ಗೆ ಹೋಗಿದ್ದರಿಂದ ಎರಡು ದಿನ ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಇರಲಿಲ್ಲ. ಆದರೆ, ಕೆಲವರು ನಾನು ದೇಶ ಬಿಟ್ಟು ಹೋಗಿದ್ದೇನೆ ಎಂಬ ಸುದ್ದಿ ಹಬ್ಬಿಸಿದರು. ರಾಜಕೀಯ ಪ್ರೇರಿತವಾಗಿ ಕೆಲವು ಮಾಧ್ಯಮಗಳೇ ಈ ರೀತಿಯ ಕಪೋಲಕಲ್ಪಿತ ವರದಿಗಳನ್ನು ಬಿತ್ತರಿಸಿದ್ದು, ಆ ಮಾಧ್ಯಮಗಳೂ ನಮ್ಮ ವಿರುದ್ಧ ಪಿತೂರಿ ನಡೆಸಿವೆ~ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.`ನಮ್ಮ ಕುಟುಂಬವನ್ನು ಸರ್ವನಾಶ ಮಾಡಲೆಂದೇ ರಾಜಕೀಯ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ. ಈ ಕಾರಣದಿಂದಲೇ ಇಂತಹ ಬೆಳವಣಿಗೆಗಳು, ಆರೋಪಗಳು ಕೇಳಿಬರುತ್ತಿವೆ. ಕೇಂದ್ರ, ಆಂಧ್ರಪ್ರದೇಶ  ಸರ್ಕಾರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ನಮ್ಮ ವಿರುದ್ಧ ಕೆಲಸ ಮಾಡುತ್ತಿರಬಹುದು ಎಂಬ ಅನುಮಾನಗಳಿವೆ~ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.