ಭಾನುವಾರ, ಜೂನ್ 13, 2021
25 °C

ನ್ಯಾಯ ಕೊಡಿ: ಸಚಿವರಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ನಗರದ ಹೊರವಲಯದಲ್ಲಿನ ಸರ್ವೆ ನಂಬರ್ 438ರಲ್ಲಿ ವಾಸಿಸುತ್ತಿರುವ ಜನರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿ ಅಲ್ಲಿನ ನಿವಾಸಿಗಳ ಸಮಿತಿ ಸದಸ್ಯರು ಶನಿವಾರ ಇಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದರು.ನಂತರ ಸ್ಥಳಕ್ಕೆ ಭೇಟಿ ನೀಡಿದ ವಸತಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ ಧರಣಿ ನಿರತರು, ಸ.ನಂ. 438ರಲ್ಲಿ ಕಳೆದ 2 ವರ್ಷಗಳಿಂದ ವಾಸ ಮಾಡುತ್ತಿರುವ 250 ಕುಟುಂಬಗಳನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಬಾರದು ಎಂದು ಮನವಿ ಮಾಡಿದರು.ಬಡವರು, ಕೂಲಿಕಾರ್ಮಿಕರು ಹಾಗೂ ನಿವೇಶನರಹಿತರೇ ಹೆಚ್ಚಾಗಿ ವಾಸ ಮಾಡುತ್ತಿದ್ದಾರೆ. ಈ ಅವಧಿಯಲ್ಲಿ ವಿದ್ಯುತ್ ಸಂಪರ್ಕ ತುಂಬಿರುವ ನಿವಾಸಿಗಳು, ನಗರಸಭೆಯಿಂದ ಸದರಿ ಮನೆಗಳಿಗೆ ದಾಖಲೆ ಪುಸ್ತಕದ ಸಂಖ್ಯೆ (ಎಂ.ಬಿ. ನಂಬರ್) ಸಹ ಪಡೆದಿದ್ದಾರೆ. ಈಗ ಏಕಾಏಕಿ ಮನೆಗಳನ್ನು ಖಾಲಿ ಮಾಡಿ ಎಂಬ ಆದೇಶದಿಂದ ಅಕಾಶವೇ ಕಳಚಿ ಬಿದ್ದಂತಾಗಿದೆ. ಸರ್ಕಾರ ನಿಗದಿಪಡಿಸಿರುವಂತೆ ಹಣವನ್ನು ಭರಿಸಲು ಸಿದ್ಧರಿದ್ದು, ತಮಗೆ ವಾಸ ಮಾಡಲು ಸದರಿ ಮನೆಗಳನ್ನು ಬಿಟ್ಟುಕೊಡಬೇಕು ಎಂದೂ ಮನವಿ ಮಾಡಿದರು.ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಶಾಸಕ ಸಂಗಣ್ಣ ಕರಡಿ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ಸಂಸದ ಶಿವರಾಮಗೌಡ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.