ಗುಲ್ಬರ್ಗ ಮತ್ತು ಬೀದರ್ ಜಿಲ್ಲೆಗಳಲ್ಲಿರುವ ಕುರುಬರು ಗೊಂಡ ಮತ್ತು ರಾಜಗೊಂಡ ಜಾತಿಗಳಿಗೆ ಸಮಾನರು. ಈ ಎರಡು ಜಿಲ್ಲೆಗಳಲ್ಲಿ ಗೊಂಡ ಮತ್ತು ರಾಜಗೊಂಡ ಜಾತಿಗಳನ್ನು ಈಗಾಗಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.

ಈ ಜಿಲ್ಲೆಗಳಲ್ಲಿರುವ ಕುರುಬರನ್ನೂ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬ ಬೇಡಿಕೆಯನ್ನು 2003ರಲ್ಲಿ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ 2004 ರಿಂದ ಎರಡು ಜಿಲ್ಲೆಗಳಲ್ಲಿರುವ ಕುರುಬರಿಗೆ ಗೊಂಡ (ಎಸ್ಟಿ) ಜಾತಿ ಪ್ರಮಾಣ ಪತ್ರ ನೀಡುತ್ತಾ ಬಂದಿದೆ. ಆದರೆ ಕಳೆದ ಗ್ರಾಮ ಪಂಚಾಯತಿ ಚುನಾವಣೆ ನಂತರ ಜಾತಿ ಪ್ರಮಾಣ ಪತ್ರ ನೀಡುವುದನ್ನು ನಿಲ್ಲಿಸಿವೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ.

ಸಂಬಂಧಿಸಿದ ಅಧಿಕಾರಿಗಳು ಕೂಡ ತಾರತಮ್ಯ ಮಾಡುತ್ತಿದ್ದಾರೆ. ಸರ್ಕಾರಿ ನೌಕರಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರ ನೀಡುತ್ತಿಲ್ಲ. ಇದರಿಂದಾಗಿ ಅನೇಕರು ನೌಕರಿಗೆ ಸೇರಿಕೊಳ್ಳಲು ಸಾಧ್ಯವಾಗಿಲ್ಲ. ಮುಖ್ಯಮಂತ್ರಿಯವರು ಇತ್ತ ಗಮನಹರಿಸಿ ನ್ಯಾಯ ದೊರಕಿಸಿಕೊಡಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.