ಬುಧವಾರ, ಜೂನ್ 16, 2021
26 °C

ನ್ಯಾಯ ಸಮ್ಮತ ಚುನಾವಣೆ: ಬಾಲಕೃಷ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಪೊಲೀಸ್‌ ಇಲಾಖೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಟಿ.ಬಾಲಕೃಷ್ಣ ಹೇಳಿದರು.ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಜಿಲ್ಲೆಯ ಮೂರು ಕ್ಷೇತ್ರಗಳು ಒಳಪಡಲಿವೆ. ಕಳೆದ ವಿಧಾನ ಸಭೆ ಚುನಾವಣೆಗಿಂತ ಈ ಬಾರಿ ಚೆಕ್‌ಪೋಸ್ಟ್‌ಗಳ ಸಂಖ್ಯೆಯನ್ನು 21ಕ್ಕೆ ಹೆಚ್ಚಿಸಲಾಗಿದೆ. ಅಧಿಕಾರಿಗಳ ಜತೆ ಚರ್ಚೆ ನಡೆಸಿ ಶೀಘ್ರದಲ್ಲಿಯೇ ಚೆಕ್‌ಪೋಸ್ಟ್‌ ತೆರೆಯುವ ಕೆಲಸ ಆರಂಭಿಸಲಾ­ಗುವುದು. ಹೊರಗಿ­ನಿಂದ ಬರುವ ವಾಹನಗಳನ್ನು ಕಡ್ಡಾಯವಾಗಿ ತಪಾ­ಸಣೆ ನಡೆಸಲಾಗುವುದು. ಜಿಲ್ಲೆಯಲ್ಲಿ ಒಟ್ಟು 910 ಮತಗಟ್ಟೆಗಳು ಇದ್ದು, ಕಂದಾಯ ಅಧಿಕಾರಿಗಳ ಜತೆ ಚರ್ಚಿಸಿ  ಸೂಕ್ಷ್ಮ ಮತ್ತು ಅತಿಸೂಕ್ಷ್ಮ  ಪಟ್ಟಿ ಮಾಡಲಾಗುವುದು ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದರುಶಾಂತಿಯುತವಾಗಿ ಚುನಾವಣೆ ನಡೆಸುವ ಸಂಬಂಧ ಹಾವೇರಿ ಜಿಲ್ಲಾಧಿಕಾರಿ ಜತೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಕೈಗೊಳ್ಳಲಾಗುವುದು. ಕೇಂದ್ರದಿಂದ ಅರೆಸೇನಾ ಪಡೆ ಆಗಮಿಸಲಿವೆ. ಎನ್‌ಸಿಸಿ, ಗೃಹರಕ್ಷಕ ದಳ

ಹಾಗೂ ಫ್ಲೈಯಿಂಗ್‌ ತಂಡಗಳನ್ನು ರಚಿಸಲಾಗಿದೆ. ಚುನಾವಣೆ ಹೇಗೆ ನಡೆಸಬೇಕು ಎಂಬುದರಕುರಿತು ಕಾರ್ಯಾಗಾರ ನಡೆಸಲಾಗಿದೆ ಎಂದರು.ರೌಡಿಗಳ ಪರೇಡ್‌: ಶಾಂತಿಯುತವಾಗಿ ಚುನಾವಣೆ ನಡೆಸಲು ಜಿಲ್ಲೆಯ ರೌಡಿಗಳ ಪರೇಡ್‌ ನಡೆಸಲಾಗಿದೆ. 58 ರೌಡಿಗಳನ್ನು ಠಾಣೆಗೆ ಕರೆಯಿಸಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಶಾಂತಿ ಕದಡದಂತೆ ಎಚ್ಚರಿಕೆ ನೀಡಲಾಗಿದೆ ಎಂದರು. ಗೋಷ್ಠಿಯಲ್ಲಿ ಡಿಎಸ್‌ಪಿ ವಿಜಯ ಬಿ. ಡಂಬಳ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.